ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಕೊರೋನಾವೈರಸ್: ಚೀನಿಯರಿಗೆ ಮತ್ತು ವಿದೇಶಿಯರಿಗೆ ವೀಸಾ ನಿಯಮ ಬಿಗಿಗೊಳಿಸಿದ ಭಾರತ

ಕೊರೊನಾ ವೈರಸ್ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಚೀನಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಭಾರತ ಸರ್ಕಾರ ತನ್ನ ದೇಶದಲ್ಲಿ ಸೋಂಕು ವ್ಯಾಪಕವಾಗಿ ಹಬ್ಬದಂತೆ ಮುಂಜಾಗ್ರತೆ ಕ್ರಮವಾಗಿ ವೀಸಾ ನಿಯಮವನ್ನು ಮತ್ತಷ್ಟು ಬಿಗಿಗೊಳಿಸಿದೆ.

Sumana Upadhyaya
Updated On : 4 Feb 2020, 2:44 pm

ಬೀಜಿಂಗ್: ಕೊರೊನಾ ವೈರಸ್ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಚೀನಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಭಾರತ ಸರ್ಕಾರ ತನ್ನ ದೇಶದಲ್ಲಿ ಸೋಂಕು ವ್ಯಾಪಕವಾಗಿ ಹಬ್ಬದಂತೆ ಮುಂಜಾಗ್ರತೆ ಕ್ರಮವಾಗಿ ವೀಸಾ ನಿಯಮವನ್ನು ಮತ್ತಷ್ಟು ಬಿಗಿಗೊಳಿಸಿದೆ.


ಚೀನೀಯರಿಗೆ ಮತ್ತು ಕಳೆದ ಎರಡು ವಾರಗಳಲ್ಲಿ ಚೀನಾ ದೇಶಕ್ಕೆ ಭೇಟಿ ನೀಡಿದ ವಿದೇಶಿಯರಿಗೆ ಈಗಿರುವ ವೀಸಾವನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.


ಚೀನಾದ ಕೇಂದ್ರ ನಗರ ವುಹಾನ್ ಪ್ರಾಂತ್ಯದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡು ಅದು ವ್ಯಾಪಕವಾಗಿ ಹಬ್ಬಿ ನಿಯಂತ್ರಣಕ್ಕೆ ಬಾರದ ಸ್ಥಿತಿ ತಲುಪಿರುವುದರಿಂದ ಮೊನ್ನೆ ಫೆಬ್ರವರಿ 2ರಂದು ಭಾರತ ಸರ್ಕಾರ ಚೀನಾ ಪ್ರಯಾಣಿಕರಿಗೆ ಮತ್ತು ಚೀನಾದಲ್ಲಿ ನೆಲೆಸಿರುವ ವಿದೇಶಿಗರಿಗೆ ಇ-ವೀಸಾ ಸೌಲಭ್ಯವನ್ನು ತಾತ್ಕಾಲಿಕವಾಗಿ ರದ್ದುಪಡಿಸಿತ್ತು.

Advertisement

Advertisement


ಈ ಮಧ್ಯೆ ಚೀನಾ ದೇಶದಲ್ಲಿ ಕೊರೊನಾ ವೈರಸ್ ಗೆ ಮೃತಪಟ್ಟವರ ಸಂಖ್ಯೆ 425ಕ್ಕೇರಿದ್ದು ನಿನ್ನೆ ಒಂದೇ ದಿನ ಮೃತರ ಸಂಖ್ಯೆ 64 ಆಗಿದೆ. ವೈರಸ್ ಕಾಣಿಸಿಕೊಂಡವರ ಸಂಖ್ಯೆ 20 ಸಾವಿರದ 438 ಇದೆ ಎಂದು ಚೀನಾದ ಆರೋಗ್ಯ ಅಧಿಕಾರಿಗಳು ಅಂಕಿಅಂಶ ನೀಡಿದ್ದಾರೆ.


ಈಗಾಗಲೇ ಭಾರತದಲ್ಲಿರುವ(ನಿಯಮಿತ ಅಥವಾ ಇ-ವೀಸಾದಡಿ)ಮತ್ತು ಚೀನಾದಿಂದ ಜನವರಿ 15ರ ನಂತರ ಭಾರತಕ್ಕೆ ಬಂದಿರುವ ವಿದೇಶಿಯರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಾಯವಾಣಿ (+91-11-23978046 ಮತ್ತು ಇ-ಮೇಲ್ ncov2019@gmail.com ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಭಾರತೀಯ ರಾಯಭಾರಿ ಕಚೇರಿ ಪ್ರಕಟಿಸಿದೆ.


ವೀಸಾದ ಸಿಂಧುತ್ವ ಬಗ್ಗೆ ಸಾಕಷ್ಟು ಸಂದೇಹಗಳು ಬಂದಿವೆ. ಈಗಿರುವ ವೀಸಾಗಳು ಸಿಂಧುತ್ವ ಹೊಂದಿರುವುದಿಲ್ಲ. ಭಾರತಕ್ಕೆ ಭೇಟಿ ನೀಡಲಿಚ್ಛಿಸುವವರು ಬೀಜಿಂಗ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಶಾಂಘೈ, ಗುವಾಂಗ್ ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments