ವಿದೇಶ

500ರ ಗಡಿಯತ್ತ ಕೊರೋನಾ ಸಾವು: ಸಾವಿನ ಸಂಖ್ಯೆ 490ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 24 ಸಾವಿರಕ್ಕೆ ಏರಿಕೆ

Manjula VN

ಬೀಜಿಂಗ್: ಮರಣ ಮೃದಂಗ ಬಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಅನ್ನು ನಿಗ್ರಹಿಸಲು ಸಹಸ್ರಾರು ಕೋಟಿ ರೂ ಹಣವನ್ನು ಚೀನಾ ವ್ಯಯಿಸುತ್ತಿದ್ದರೂ ಫಲ ಸಿಗುತ್ತಿಲ್ಲ. ಸೋಮವಾರ ಒಂದೇ ದಿನ ಈ ವೈರಾಣು 65 ಮಂದಿಯನ್ನು ಬಲಿ ಪಡೆದಿದ್ದು, ಒಟ್ಟು ಸಾವಿನ ಸಂಖ್ಯೆ 490ಕ್ಕೆ ಏರಿಕೆಯಾಗಿದೆ. 

ಕೊರೋನಾದಿಂದ ಬಲಿಯಾದವರ ಸಂಖ್ಯೆ 500ರ ಗಡಿಯತ್ತ ದಾಪುಗಾಲು ಇಡುತ್ತಿರುವುದರಿಂದ ಚೀನಾ ಆತಂಕಗೊಂಡಿರುವಾಗಲೇ, ಹೊಸದಾಗಿ 3235 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಚೀನಾದಲ್ಲಿ ಈ ಸೋಂಕಿನಿಂದ ನರಳುತ್ತಿರುವವರ ಸಂಖ್ಯೆ 24,324 ಕ್ಕೇರಿಕೆಯಾಗಿದ್ದು, ಆ ದೇಶವನ್ನು ಅಕ್ಷರಶಃ ನಿದ್ರೆಗೆಡಿಸಿದೆ. 

ಸೋಮವಾರ ಮೃತಪಟ್ಟಿ 65 ಮಂದಿ, ಕೊರೋನಾದ ಕೇಂದ್ರ ಬಿಂದುವಾಗಿರುವ ಹುಬೆ ಪ್ರಾಂತ್ಯಕ್ಕೆ ಸೇರಿದವರಾಗಿ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. 

ಕೊರೋನಾ ವೈರಾಣು ಬಾಧೆಗೆ ತುತ್ತಾಗಿ ಬಳಿಕ ಚೇತರಿಸಿಕೊಕಂಡ 632 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆಯಾದರೂ, ಹೊಸದಾರಿ ಆಸ್ಪತ್ರೆ ಸೇರುತ್ತಿರುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿದೆ. ಸೋಮವಾರ ಒಂದೇ ದಿನ ಬರೋಬ್ಬರಿ 3235 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. 

SCROLL FOR NEXT