26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಮೊನ್ನೆ ಜೈಲು, ಶೀಘ್ರವೇ ಬಿಡುಗಡೆಯ ಭಾಗ್ಯ!?
ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಹೊತ್ತಿರುವ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು.
ಇಸ್ಲಾಮಾಬಾದ್: ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಹೊತ್ತಿರುವ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಈಗ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆ (ಎಫ್ಎಟಿಎಫ್) ತೀರ್ಪಿನ ನಂತರ ಆತನನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಫೆ.16 ರಂದು ಪ್ಯಾರಿಸ್ ನಲ್ಲಿ ನಡೆಯಲಿರುವ ಎಫ್ಎಟಿಎಫ್ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆ ಬೇಡವೇ ಎಂಬ ಬಗ್ಗೆ ತೀರ್ಮಾನಿಸಲಿದೆ. ಎಫ್ಎಟಿಎಫ್ ನ ಒತ್ತಡದಿಂದಾಗಿ ಪಾಕಿಸ್ತಾನದ ನ್ಯಾಯಾಲಯ ಹಫೀಜ್ ಸಯೀದ್ ಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಜೈಲು ಶಿಕ್ಷೆ ವಿಧಿಸಿದೆ. ಎಫ್ಎಟಿಎಫ್ ಪಾಕಿಸ್ತಾನದ ವಿಷಯದಲ್ಲಿ ತೀರ್ಮಾನ ಕೈಗೊಂಡ ನಂತರ ಪಾಕ್ ನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹಫೀಜ್ ಸಯೀದ್ ನ ವಕೀಲರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹಫೀಜ್ ಸಯೀದ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.