ಕೊರೋನಾ ವೈರಸ್: ಬಿಲ್ ಗೇಟ್ ಔದಾರ್ಯಕ್ಕೆ ವಿಶ್ವ ನಾಯಕರ ಮೆಚ್ಚುಗೆ!
ಕೊರೋನಾ ವೈರಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ಜಾಗತಿಕ ಕಾರ್ಯತಂತ್ರಕ್ಕಾಗಿ ವಿಶ್ವದ ಕುಬೇರ ಎಂದೇ ಗುರುತಿಸಿಕೊಂಡಿರುವ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 100 ಮಿಲಿಯನ್ ಡಾಲರ್ ಸುಮಾರು 718 ಕೋಟಿ ರೂಪಾಯಿ ದೇಣಿಗೆ ನೀಡಿ ಔದಾರ್ಯ ಮೆರೆದಿದೆ.
ಬೀಜಿಂಗ್ : ಕೊರೋನಾ ವೈರಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ಜಾಗತಿಕ ಕಾರ್ಯತಂತ್ರಕ್ಕಾಗಿ ವಿಶ್ವದ ಕುಬೇರ ಎಂದೇ ಗುರುತಿಸಿಕೊಂಡಿರುವ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 100 ಮಿಲಿಯನ್ ಡಾಲರ್ ಸುಮಾರು 718 ಕೋಟಿ ರೂಪಾಯಿ ದೇಣಿಗೆ ನೀಡಿ ಔದಾರ್ಯ ಮೆರೆದಿದೆ.
ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ನ 'ಔದಾರ್ಯ'ಕ್ಕಾಗಿ ಮತ್ತು ಮಾರಕ ಕೊರೋನವೈರಸ್ ಸೋಂಕನ್ನು ಎದುರಿಸಲು ನೀಡಿದ ಬೆಂಬಲಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೇರಿದಂತೆ ದಂತೆ ವಿಶ್ವದ ಹಲವು ನಾಯಕರು ಕೊಡಗೆಯನ್ನು ಸ್ಮರಿಸಿದ್ದಾರೆ.
ಮೆಚ್ಚಿದ್ದಾರೆ. ಈ ಸಂಬಂಧ ಚೀನಾ ಅಧ್ಯಕ್ಷರು ಫೌಂಡೇಶನ್ ಗೆ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತು ಸಹಾಯದ ಹಸ್ತಚಾಚಿದ ಗೇಟ್ ಉಪಕಾರವನ್ನು ಸ್ಮರಿಸಿ ಧನ್ಯವಾದ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.