ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಮುಂದುವರೆದ ಕೊರೋನಾ ಮರಣ ಮೃದಂಗ: ಒಂದೇ ದಿನ 150 ಸಾವು, ಸಾವಿನ ಸಂಖ್ಯೆ 2, 592ಕ್ಕೆ ಏರಿಕೆ!

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಬರೊಬ್ಬರಿ 150 ಮಂದಿ ಸೋಂಕು ಪೀಡಿತರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 2, 592ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 24 Feb 2020, 12:40 pm

ಬೀಜಿಂಗ್: ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಬರೊಬ್ಬರಿ 150 ಮಂದಿ ಸೋಂಕು ಪೀಡಿತರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 2, 592ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಮಾಹಿತಿ ನೀಡಿದ್ದು, ಫೆಬ್ರವರಿ 23 ಅಂದರೆ ನಿನ್ನೆ ಒಂದೇ ದಿನಾ ಚೀನಾದಾದ್ಯಂತ ಸುಮಾರು 150 ಮಂದಿ ಕೊರೋನಾ ವೈರಸ್ ಸೋಂಕು ಪೀಡಿತರು ಸಾವಪನ್ನಪ್ಪಿದ್ದಾರೆ. ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2, 592ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ 409 ಮಂದಿಯಲ್ಲಿ ಹೊಸದಾಗಿ ಕೊರೋನಾ ವೈರಸ್ ಸೋಂಕು ಕಂಡು ಬಂದಿದೆ ಎಂದು ಮಾಹಿತಿ ನೀಡಿದೆ.

ಓರ್ವ ಸಿಬ್ಬಂದಿಗೆ ಸೋಂಕು, ಕಂಪನಿಯಬ 82 ಜನರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ
ಇತ್ತ ಚೀನಾದ ಆನ್ ಲೈನ್ ಪುಸ್ತಕ ಚಿಲ್ಲರೆ ಅಂಗಡಿಯ ಓರ್ವ ಉದ್ಯೋಗಿಯಲ್ಲಿ ಕೋವಿದ್ ಸೋಂಕು (ಕೊರೋನಾ ವೈರಸ್) ಕಾಣಿಸಿಕೊಂಡಿದ್ದರಿಂದ ಎಲ್ಲಾ 82 ಉದ್ಯೋಗಿಗಳನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಫೆ. 19ರಂದು ದಂಗ್ ದಂಗ್ ಡಾಟ್ ಕಾಮ್ ಅಂಗಡಿಯಯ ಉದ್ಯೊಗಿಯೋರ್ವರಲ್ಲಿ ಸೋಂಕಿರುವುದನ್ನು ವೈದ್ಯರು ದೃಢಪಟಿಸಿದ್ದರು. ಈಕೆ ಜ. 21ರಂದು ಹೆಯಿಲಲಾಂಗ್ ಜಿಯಾಂಗ್ ಕ್ಕೆ ಪ್ರಯಾಣ ಬೆಳೆಸಿ ಫೆ. 5ರಂದು ಬೀಜಿಂಗ್ ಗೆ ಮರಳಿದ್ದರು. ಶನಿವಾರದವರೆಗೆ ಅವರು 82 ಜನರ ಸಂಪರ್ಕಕ್ಕೆ ಬಂದಿದ್ದರು. ಈ ಎಲ್ಲಾ ವ್ಯಕ್ತಿಗಳನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments