ಹತಿರ್ ಮೊಹಮದ್ 
ವಿದೇಶ

ಮಲೇಷಿಯಾ ಪ್ರಧಾನಿ ಮಹತಿರ್ ಮೊಹಮದ್ ರಾಜೀನಾಮೆ

ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮದ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.

ಕೌಲಾಲಂಪುರ: ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮದ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.

‘ಮಹತಿರ್ ಮೊಹಮದ್ ಅವರು ಇಂದು ಮಲೇಷ್ಯಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ರಾಜೀನಾಮೆ ಪತ್ರವನ್ನು ಮಧ್ಯಾಹ್ನ ಮಲೇಷಿಯಾದ ರಾಜರಿಗೆ ಸಲ್ಲಿಸಲಾಗಿದೆ’ ಎಂದು ಪ್ರಧಾನಮಂತ್ರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರತಿಪಕ್ಷಗಳು ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು ಭಾನುವಾರ ಸಭೆಗಳನ್ನು ನಡೆಸುವ ಮೂಲಕ ರಾಜಕೀಯ ಮರುಮೈತ್ರಿಯನ್ನು ಯೋಜಿಸುತ್ತಿವೆ ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.
  
ಪಕಾಟನ್ ಹರಪನ್ ಎಂದು ಕರೆಯಲ್ಪಡುವ ‘ಅಲೈಯನ್ಸ್ ಆಫ್ ಹೋಪ್’ ಒಕ್ಕೂಟ ಮೇ 2018 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದ ನಂತರ ಮಹತಿರ್ ಮಲೇಷ್ಯಾ ಪ್ರಧಾನಿಯಾಗಿ ಅಧಿಕಾರಕ್ಕೇರಿದ್ದರು.  ಮಹತಿರ್ ಅವರು ಪಕಾಟನ್ ಹರಪನ್‌ ಒಕ್ಕೂಟದ ನಾಲ್ಕು ಮೈತ್ರಿ ಪಕ್ಷಗಳಲ್ಲಿ ಒಂದಾದ ಪ್ರಿಬುಮಿ ಬರ್ಸಾಟು ಮಲೇಷ್ಯಾ (ಪಿಪಿಬಿಎಂ)ನ ಅಧ್ಯಕ್ಷರೂ ಆಗಿದ್ದಾರೆ.
  
ಮಹತಿರ್ ಅವರ ರಾಜೀನಾಮೆ ಹೇಳಿಕೆಗೂ ಮುನ್ನ ಪಿಪಿಬಿಎಂ ಅಧ್ಯಕ್ಷ ಮುಹಿದ್ದೀನ್ ಯಾಸಿನ್ ಹೇಳಿಕೆ ನೀಡಿ, ಫೆ. 23 ರಂದು ನಡೆದ ಸಭೆಯ ನಂತರ ಪಕಟಾನ್ ಹರಪನ್ ಒಕ್ಕೂಟವನ್ನು ತ್ಯಜಿಸಲು ಪಕ್ಷದ ಸರ್ವೋಚ್ಛ ಮಂಡಳಿ ನಿರ್ಧರಿಸಿದೆ ಎಂದು  ತಿಳಿಸಿದ್ದಾರೆ.
  
‘ದೇಶದ ಸದ್ಯದ ಮತ್ತು ಭವಿಷ್ಯದ ರಾಜಕೀಯ ಬೆಳವಣಿಗೆಗಳನ್ನು ಗಣನೆಗೆ ತೆಗೆದುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.’ ಎಂದು ಮುಹಿದ್ದೀನ್ ಯಾಸಿನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT