ನೀರವ್ ಮೋದಿ 
ವಿದೇಶ

ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಮಾ. 24ರ ವರೆಗೆ ವಿಸ್ತರಣೆ

ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಮಾರ್ಚ್ 24ರ ವರೆಗೆ ವಿಸ್ತರಿಸಿದೆ.

ಲಂಡನ್: ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಮಾರ್ಚ್ 24ರ ವರೆಗೆ ವಿಸ್ತರಿಸಿದೆ.

ಪ್ರಸ್ತುತ ಜೈಲಿನಲ್ಲಿರುವ 48 ವರ್ಷದ ನೀರವ್ ಮೋದಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಡೇವಿಡ್ ರೊಬಿನ್ಸನ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 24ರ ವರೆಗೆ ವಿಸ್ತರಿಸಿದರು.

ಇದೇ ವೇಳೆ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ವರ್ಷ ಮೇ 11ರಿಂದ 15ರ ವರೆಗೆ ವಿಚಾರಣೆ ನಡೆಯಲಿದೆ ಎಂದು ಲಂಡನ್ ಕೋರ್ಟ್ ತಿಳಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT