ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಯಾವ ದಾಳಿಯೂ ನಡೆದಿಲ್ಲ, ಗುರುದ್ವಾರ ಅಪವಿತ್ರವಾಗಿದೆ ಎಂಬುದೆಲ್ಲಾ ಸುಳ್ಳು: ಪಾಕಿಸ್ತಾನ

ಪಾಕಿಸ್ತಾನದ ಲಾಹೋರ್ ಸಮೀಪವಿರುವ, ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ಅವರ ಜನ್ಮಸ್ಥಳ ನಾನಕಾನ ಸಾಹಿಬ್ ನಲ್ಲಿನ ಗುರುದ್ವಾರದ ಮೇಲಿನ ಕಲ್ಲು ತೂರಾಟ ವಿರುದ್ಧ ಹಲವು ಆಕ್ರೋಶ ವ್ಯಕ್ತವಾಗುತ್ತಿರುವ ನಡುವಲ್ಲೇ ಭಾರತದ ಆರೋಪ ಸುಳ್ಳು ಎಂದು ಪಾಕಿಸ್ತಾನ ಹೇಳಿದೆ.

ಸಂಗ್ರಹ ಚಿತ್ರ
Manjula VN
Updated On : 5 Jan 2020, 8:47 am

ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್ ಸಮೀಪವಿರುವ, ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ಅವರ ಜನ್ಮಸ್ಥಳ ನಾನಕಾನ ಸಾಹಿಬ್ ನಲ್ಲಿನ ಗುರುದ್ವಾರದ ಮೇಲಿನ ಕಲ್ಲು ತೂರಾಟ ವಿರುದ್ಧ ಹಲವು ಆಕ್ರೋಶ ವ್ಯಕ್ತವಾಗುತ್ತಿರುವ ನಡುವಲ್ಲೇ ಭಾರತದ ಆರೋಪ ಸುಳ್ಳು ಎಂದು ಪಾಕಿಸ್ತಾನ ಹೇಳಿದೆ. 

ಪಾಕಿಸ್ತಾನ, ಬಾಂಗ್ಲಾದೇಶದ ಹಾಗೂ ಆಫ್ಘಾನಿಸ್ತಾನದಿಂದ ನಿರಾಶ್ರಿತರಾಗಿ ಬರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಕುರಿತು ದೇಶದಲ್ಲಿ ಆಕ್ರೋಶ ಭುಗಿಲೆದ್ದಿರುವ ಸಂದರ್ಭದಲ್ಲಿಯೇ ಪಾಕಿಸ್ತಾನದಲ್ಲಿ ಸಿಕಖರ ಮೇಲೆ ನಡೆದಿರುವ ದಾಳಿ ಬಗ್ಗೆ ಭಾರತ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿಿತ್ತು. ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷ್ಯ ಬೇಕೆ? ಎಂದು ಹೇಳಿತ್ತು. 

ದಾಳಿಗೆ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳು ಸೇರಿದಂತೆ ಭಾರತದಲ್ಲಿ ಸರ್ವತ್ರ ಆಕ್ರೋಷಗಳು ವ್ಯಕ್ತವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಪಾಕಿಸ್ತಾನ, ಗುರುದ್ವಾರದ ಮೇಲೆ ದಾಳಿ ನಡೆದಿಲ್ಲ. ಗುರುದ್ವಾರ ಸುರಕ್ಷಿತವಾಗಿದೆ. ನಾನಕಾನ ಸಾಹಿಬ್ ಬಳಿ ಮುಸ್ಲಿಂ ಗುಂಪುಗಳ ನಡುವೆ ಸಣ್ಣ ಘರ್ಷಣೆಯಷ್ಟೇ ನಡೆದಿದೆ ಎಂದು ಹೇಳಿದೆ. 

Advertisement

Advertisement

ಗುರುದ್ವಾರದ ಮೇಲೆ ದಾಳಿ ಮಾಡಿ ಹಾನಿ ಮಾಡಲಾಗಿದೆ ಎಂಬುದು ಸುಳ್ಳು. ನಾನಕಾನ ಸಾಹೀಬ್ ನಗರದಲ್ಲಿ ಶುಕ್ರವಾರ ಎರಡು ಮುಸ್ಲಿಂ ಗುಂಪುಗಳ ನಡುವೆ ಸಂಘರ್ಷ ನಡೆಯಿತು. ಚಹಾ ಅಂಗಡಿಯಲ್ಲಿ ನಡೆದ ಸಣ್ಣ ಹೊಡೆದಾಟ ಇದಾಗಿದ್ದು, ಗುರುದ್ವಾರನವನ್ನು ಯಾರೂ ಮುಟ್ಟಿಲ್ಲ ಹಾಗೂ ಅದಕ್ಕೆ ಹಾನಿಯೂ ಆಗಿಲ್ಲ. ಈ ಹೊಡೆದಾಟಕ್ಕೆ ಕೋಮು ಬಣ್ಣ ಕಟ್ಟಲಾಗುತ್ತಿದೆ. ಗುರುದ್ವಾರ ಅಪವಿತ್ರಗೊಳಿಸಲಾಗಿದೆ ಎಂಬುದು ಸುಳ್ಳು ಎಂದು ಹೇಳಿಕೊಂಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments