ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟ, ಕನಿಷ್ಛ 15 ಸಾವು, 20 ಮಂದಿಗೆ ಗಾಯ
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈಗ್ಗೆ ಮೂರು ದಿನಗಳ ಹಿಂದಷ್ಟೇ ಇದೇ ಕ್ವೆಟ್ಟಾದಲ್ಲಿ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬಾಂಬ್ ಸ್ಫೋಟದ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತಿಲ್ಲವಾದರೂ ತಾಲಿಬಾನ್ ಉಗ್ರ ಸಂಘಟನೆ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.