ಸುಡಾನ್ ನಲ್ಲಿ ಗ್ರೆನೇಡ್ ಸ್ಫೋಟ: ಕನಿಷ್ಠ 7 ಸಾವು, 40 ಜನರಿಗೆ ಗಾಯ
ಸುಡಾನ್ ರಾಜಧಾನಿ ಖಾರ್ಟೌಮ್ ನಲ್ಲಿ ಅಪರಿಚಿತರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಾಸ್ಕೋ: ಸುಡಾನ್ ರಾಜಧಾನಿ ಖಾರ್ಟೌಮ್ ನಲ್ಲಿ ಅಪರಿಚಿತರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಸುಡಾನ್ ಆರೋಗ್ಯ ಇಲಾಖೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸುಡಾನ್ ರಾಜಧಾನಿ ಖಾರ್ಟೌಮ್ ನ ಶೇಗ್ಲಾ ಪ್ರಾಂತ್ಯದಲ್ಲಿನ ಅಲ್ ಹಜ್ ಯೂಸೆಫ್ ಜಿಲ್ಲೆಯಲ್ಲಿ ಸ್ಫೋಟ ನಡೆದಿದೆ. ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಇಲ್ಲಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಸೌದಿ ಅಲ್ ಅರೇಬಿಯಾ ಟಿವಿ ಚಾನೆಲ್ ವರದಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.