ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ ಕೊರೋನಾ ಸೋಂಕು!
ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.
"ನನಗೆ ಕೋವಿಡ್ ಪರೀಕ್ಷೆ ನಡೆಸಿದ್ದು ಧನಾತ್ಮಕ ವರದಿ ಬಂದಿದೆ" ಎಂದು ಖುರೇಷಿ ಹೇಳಿದ್ದಾರೆ.
"ಈ ಮಧ್ಯಾಹ್ನ ನನಗೆ ಸ್ವಲ್ಪ ಜ್ವರ ಬಂತು ಮತ್ತು ತಕ್ಷಣ ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನಾನು ಈಗ ಕೋವಿಡ್ -19 ಧನಾತ್ಮಕ ವರದಿ ಪಡೆದಿದ್ದೇನೆ. " ಖುರೇಷಿ ಟ್ವೀಟ್ ಮಾಡಿದ್ದಾರೆ.
"ನಾನು ಸಾಕಷ್ಟು ಗಟ್ಟಿಯಾಗಿದ್ದೇನೆ ಎಂದು ಭಾವಿಸುತ್ತೇನೆ. ನಾನು ಮನೆಯಿಂದಲೇ ನನ್ನ ಕರ್ತವ್ಯಗಳನ್ನು ಮುಂದುವರಿಸುತ್ತೇನೆ. ದಯವಿಟ್ಟು ನನಗಾಗಿ ನಿಮ್ಮ ಪ್ರಾರ್ಥನೆ ಇರಲಿ" ಅವರು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.