ಸಂಗ್ರಹ ಚಿತ್ರ 
ವಿದೇಶ

105 ವರ್ಷದ ಕೊರೋನಾ ವೈರಸ್ ಸೋಂಕಿತ ವೃದ್ಧ ಗುಣಮುಖ!

ಮಹಾಮಾರಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 105 ವರ್ಷದ ವೃದ್ಧರೊಬ್ಬರು ಗುಣಮುಖರಾಗಿದ್ದು, ಇದರೊಂದಿಗೆ ಮತ್ತಷ್ಟು ಕೊರೋನಾ ಸೋಂಕಿತರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದಾರೆ. 

ಇಸ್ಲಾಮಾಬಾದ್: ಮಹಾಮಾರಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 105 ವರ್ಷದ ವೃದ್ಧರೊಬ್ಬರು ಗುಣಮುಖರಾಗಿದ್ದು, ಇದರೊಂದಿಗೆ ಮತ್ತಷ್ಟು ಕೊರೋನಾ ಸೋಂಕಿತರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದಾರೆ.
 
ಪಾಕಿಸ್ತಾನದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಫಝಲ್ ರಾವುಫ್ ಕೊರೋನಾ ಗೆದ್ದ ವ್ಯಕ್ತಿಯಾಗಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಫಝಲ್ ಅವರಿಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಗುರುವಾರ ಮತ್ತೆ ಪರೀಕ್ಷೆಗೊಳಪಡಿಸಲಾಗಿದ್ದು, ಇದೀಗ ವೈದ್ಯಕೀಯ ವರದಿಯಲ್ಲಿ ಕೊರೋನಾ ಇಲ್ಲದಿರುವುದು ತಿಳಿದುಬಂದಿದೆ. 

ನಿನ್ನೆಯಷ್ಟೇ ಫಝಲ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ. 

ಪಾಕಿಸ್ತಾನದಲ್ಲಿ ಈ ವರೆಗೂ 221,896 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 4,551 ಮಂದಿ ಸಾವನ್ನಪ್ಪಿದ್ದಾರೆ. 113,623 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

ಬಿಜೆಪಿ-ಸಿಪಿಐ(ಎಂ) ಹೊಂದಾಣಿಕೆಯಿಂದ ಕೇರಳಕ್ಕೆ ಹೊಸ ಹೆಸರು; ಕೇಂದ್ರ ಬಂಗಾಳವನ್ನು ನಿರ್ಲಕ್ಷಿಸಿದೆ: ಮಮತಾ

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

SCROLL FOR NEXT