ವಿದೇಶ

ಗಾಳಿಯಲ್ಲಿ ಕೊರೊನಾ ಹರಡಲಿದೆ ಎಂಬ ವಾದ ತಳ್ಳಿಹಾಕುವುದಿಲ್ಲ: ವಿಶ್ವ ಆರೋಗ್ಯ ಸಂಸ್ಥೆ

Manjula VN

ಜಿನಿವಾ: ಕೊರೊನಾ ವೈರಸ್ ಗಾಳಿಯ ಮೂಲಕ ಹರಡುತ್ತದೆ ಎಂಬ ವಾದವನ್ನು ತಳ್ಳಿಹಾಕಲಾಗದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒಒ) ಹೇಳಿದೆ.

ವಿಶ್ವದಾದ್ಯಂತ ೨೦೦ ಕ್ಕೂ ಹೆಚ್ಚು ವಿಜ್ಞಾನಿಗಳು ಕೊರೊನಾ ವೈರಸ್ ಗಾಳಿಯ ಮೂಲಕ ಹರಡುತ್ತದೆ ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಸಂಬಂಧಿಸಿದ ಆಧಾರಗಳನ್ನು ಪರಿಗಣಿಸಿರುವ ಡಬ್ಲ್ಯುಎಚ್ ಒ ಅವರ ವಾದವನ್ನು ಬೆಂಬಲಿಸಿದೆ.

ಈ ಹಿನ್ನಲೆಯಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂದು ವಿಜ್ಞಾನಿಗಳ ತಂಡ ವಿಶ್ವ ಆರೋಗ್ಯ ಸಂಸ್ಥೆಯನ್ನು ಕೋರಿದೆ.

SCROLL FOR NEXT