ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ (ಸಂಗ್ರಹ ಚಿತ್ರ) 
ವಿದೇಶ

ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು- ನೇಪಾಳ ಪ್ರಧಾನಿ 

ರಾಜೀನಾಮೆಯ ಆಗ್ರಹದ ಒತ್ತಡದ ನಡುವೆ ದೇಶವನ್ನುದ್ದೇಶಿಸಿ ಮಾತನಾಡಿರುವ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕಠ್ಮಂಡು: ರಾಜೀನಾಮೆಯ ಆಗ್ರಹದ ಒತ್ತಡದ ನಡುವೆ ದೇಶವನ್ನುದ್ದೇಶಿಸಿ ಮಾತನಾಡಿರುವ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮತ್ತಷ್ಟು ಸಮಯ ತೆಗೆದುಕೊಳ್ಳುವ ನಿಟ್ಟಿನಲ್ಲಿ, ಶುಕ್ರವಾರ ನಡೆಯಬೇಕಿದ್ದ ಆಡಳಿತ ಪಕ್ಷ ನೇಪಾಳ ಕಮ್ಯುನಿಸ್ಟ್ ಪಕ್ಷದ ಮಹತ್ವದ ಸಭೆಯನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ನೇಪಾಳದಲ್ಲಿ ರಾಜಕಿಯ ಅಸ್ಥಿರತೆ ಉಂಟಾಗಿದ್ದು, ದಿಢೀರ್ ದೇಶವನ್ನುದ್ದೇಶಿಸಿ ಮಾತನಾಡಿರುವ ಕೆ.ಪಿ ಶರ್ಮಾ ಓಲಿ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ತಳ್ಳಿಹಾಕಿರುವುದೂ ಅಲ್ಲದೇ, ಇಂತಹ ಆಂತರಿಕ ಭಿನ್ನಾಭಿಪ್ರಾಯಗಳು ಸಹಜ, ಅದನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. 

ಇದೇ ವೇಳೆ ನೇಪಾಳದ ಸಾರ್ವಭೌಮತೆ ಹಾಗೂ ಸಮಗ್ರತೆಯನ್ನು ಕಾಪಾಡಲು ಬದ್ಧ ಎಂದು ನೇಪಾಳ ಪ್ರಧಾನಿ ದೇಶದ ಜನತೆಗೆ ತಿಳಿಸಿದ್ದಾರೆ. ಸ್ವಪಕ್ಷೀಯರಿಂದಲೇ ರಾಜೀನಾಮೆಗೆ ಆಗ್ರಹ, ನೇಪಾಳ ಕಮ್ಯುನಿಸ್ಟ್ ಪಕ್ಷದ ಸ್ಥಾಯಿಸಮಿತಿ ಸಭೆ ಸತತ ನಾಲ್ಕನೇ ಬಾರಿಗೆ ಒಂದು ವಾರಗಳ ಕಾಲ ಮುಂದೂಡಲ್ಪಟ್ಟಿರುವ ಬೆಳವಣಿಗೆಗಳ ಬೆನ್ನಲ್ಲೇ ನೇಪಾಳ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. 45 ಸದಸ್ಯರುಳ್ಳ ಎನ್ ಸಿಪಿ ಸ್ಥಾಯಿಸಮಿತಿ ಸಭೆ ಶುಕ್ರವಾರ ನಡೆಯಬೇಕಿತ್ತು. ಆದರೆ ಪ್ರವಾಹ ಹಾಗೂ ಭೂಕುಸಿತಗಳಿಂದ 22 ಜನರು ಸಾವನ್ನಪ್ಪಿರುವುದನ್ನು ಮುಂದಿಟ್ಟುಕೊಂಡು ಕೊನೆಯ ಘಳಿಗೆಯಲ್ಲಿ ಒಂದು ವಾರಗಳ ಕಾಲ ಮುಂದೂಡಲಾಯಿತು.

ಭಾರತದೊಂದಿಗೆ ನೇಪಾಳದ ಗಡಿ ವಿವಾದ ಹಾಗೂ ಆ ನಂತರದ ಪರಿಸ್ಥಿತಿಗಳಲ್ಲಿ ನೇಪಾಳದ ಪ್ರಧಾನಿ ನೀಡಿದ್ದ ಭಾರತ ವಿರೋಧಿ ಹೇಳಿಕೆಗಳನ್ನು ಖಂಡಿಸಿ ಪ್ರಧಾನಿಯವರ ಸ್ವಪಕ್ಷೀಯರಾದ ಮಾಜಿ ಪ್ರಧಾನಿ ಪುಷ್ಪಕಮಲ್ ದಹಲ್ (ಪ್ರಚಂಡ) ಸೇರಿದಂತೆ ಹಲವು ನಾಯಕರು ಕೆಪಿ ಶರ್ಮಾ ಓಲಿ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT