ವಿಶ್ವ ಆರೋಗ್ಯ ಸಂಸ್ಥೆಗೆ ಕೊರೋನಾ ಸೋಂಕಿನ ಮಾಹಿತಿ ನೀಡುವಲ್ಲಿ ತಡ ಮಾಡಿಲ್ಲ: ಚೀನಾ ಸಮರ್ಥನೆ
ಕೊರೋನಾ ಸಾಂಕ್ರಾಮಿಕ ರೋಗದ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ಮುಂಚಿತವಾಗಿಯೇ ಮಾಹಿತಿ ನೀಡುವಲ್ಲಿ ಚೀನಾ ವಿಳಂಬ ಮಾಡಿತು ಎಂಬ ಸುದ್ದಿಗಳು ವಾಸ್ತವಕ್ಕೆ ದೂರವಾದವು ಎಂದು ಚೀನಾ ಹೇಳಿದೆ.
ಬೀಜಿಂಗ್: ಕೊರೋನಾ ಸಾಂಕ್ರಾಮಿಕ ರೋಗದ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ಮುಂಚಿತವಾಗಿಯೇ ಮಾಹಿತಿ ನೀಡುವಲ್ಲಿ ಚೀನಾ ವಿಳಂಬ ಮಾಡಿತು ಎಂಬ ಸುದ್ದಿಗಳು ವಾಸ್ತವಕ್ಕೆ ದೂರವಾದವು ಎಂದು ಚೀನಾ ಹೇಳಿದೆ.
ವಿದೇಶಾಂಗ ಅಧಿಕಾರಿ ಜಾವೊ ಲಿಜಿಯಾನ್ ಬುಧವಾರ ಮಾಧ್ಯಮಗಳು ಕೇಳಿದ ಹಲವು ಪ್ರಶ್ನೆಗಳಿಗೆ ಈ ಉತ್ತರ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಗೆ ಕೊರೊನಾ ವೈರಸ್ ಪ್ರಸರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲು ಯಾವುದೇ ವಿಳಂಬ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊರೊನಾ ಸೋಂಕು ಹಬ್ಬುವುದರ ಮಾಹಿತಿ ಹಂಚಿಕೊಳ್ಳಲು ಚೀನಾ ವಿಳಂಬ ಮಾಡಿದ್ದರಿಂದ ಡಬ್ಲ್ಯುಎಚ್ಓ ನಿರಾಶೆಗೊಂಡಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಮಂಗಳವಾರ ವರದಿ ಮಾಡಿತ್ತು.
ಕೊರೋನಾ ಮಹಾಮಾರಿಗೆ ಜಗತ್ತಿನಾದ್ಯಂತ 3.83 ಲಕ್ಷ ಮಂದಿ ಬಲಿಯಾಗಿದ್ದಾರೆ. ಇನ್ನು 64.86 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 31 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.