ವಿದೇಶ

ಜಾರ್ಜ್ ಫ್ಲೋಯ್ಡ್ ಹತ್ಯೆ ಪ್ರಕರಣ: ಪ್ರತಿಭಟಕಾರರ ಬಳಿ ಕಾರು ಓಡಿಸಿಕೊಂಡು ಬಂದ ವ್ಯಕ್ತಿಯಿಂದ ಗುಂಡಿನ ದಾಳಿ, ಓರ್ವನಿಗೆ ಗಾಯ

Manjula VN

ಸೀಟಲ್: ಕಪ್ಪು ವರ್ಣೀಯ ಜಾರ್ಜ್ ಫ್ಲೋಯ್ಜ್ ಹತ್ಯೆ ಪ್ರಕರಣ ಖಂಡಿಸಿ ವಾಷಿಂಗ್ಟನ್ ನ ಸೀಟಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಪ್ರತಿಭಟನಾಕಾರರ ಬಳಿ ಕಾರು ಓಡಿಸಿಕೊಂಡು ಬಂದಿದ್ದು, ನಂತರ ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. 

ಪ್ರತಿಭಟನೆ ವೇಳೆ ಕಾರು ಓಡಿಸಿಕೊಂಡು ಬಂದ ವ್ಯಕ್ತಿ ಸ್ಥಳದಲ್ಲಿದ್ದ ಬ್ಯಾರಿಕೇಡ್'ಗೆ ಡಿಕ್ಕೆ ಹೊಡೆದಿದ್ದಾನೆ. ಬಳಿಕ ಕಾರನಿಂದ ಇಳಿದು ಪಿಸ್ತೂಲ್ ತೆಗೆದುಕೊಂಡು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾನೆ. ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಘಟನೆಯಲ್ಲಿ 27 ವರ್ಷದ ವ್ಯಕ್ತಿ ಗಾಯಗೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ ಎಂದು ಸೀಟಲ್ ಅಗ್ನಿ ಶಾಮಕದಳದ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. 

ಇನ್ನು ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ. 

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು, ಬಾಟಲ್ ಹಾಗೂ ಸ್ಫೋಟಕ ವಸ್ತುಗಳಿಂದ ದಾಳಿ ನಡೆಸಿದ್ದು, ಘಟೆಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದಾರೆಂದು ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. 

SCROLL FOR NEXT