ಚೀನಾ 
ವಿದೇಶ

ಕೋವಿಡ್ 19: ಕೈಗಾರಿಕಾ ಉತ್ಪಾದನೆಯಲ್ಲಿ ಮತ್ತೆ ಪುಟಿದು ನಿಂತ ಚೀನಾ, ಮೇ ತಿಂಗಳಲ್ಲಿ 4.4ಕ್ಕೆ ಏರಿಕೆ!

ಕೋವಿಡ್ 19 ಹುಟ್ಟೂರು ಚೀನಾದಲ್ಲಿ ಪ್ರಪಾತಕ್ಕೆ ಕುಸಿದಿದ್ದ ಕೈಗಾರಿಕಾ ಉತ್ಪಾದನೆಯು ಮತ್ತೆ ಏರಿಕೆಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವುದರ ಮುನ್ಸೂಚನೆ ನೀಡಿದೆ.

ಬೀಜಿಂಗ್: ಕೋವಿಡ್ 19 ಹುಟ್ಟೂರು ಚೀನಾದಲ್ಲಿ ಪ್ರಪಾತಕ್ಕೆ ಕುಸಿದಿದ್ದ ಕೈಗಾರಿಕಾ ಉತ್ಪಾದನೆಯು ಮತ್ತೆ ಏರಿಕೆಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವುದರ ಮುನ್ಸೂಚನೆ ನೀಡಿದೆ. 

2020ರ ಮೇ ತಿಂಗಳಲ್ಲಿ ಚೀನಾದ ಕೈಗಾರಿಕಾ ಉತ್ಪಾದನೆಯು ಶೇಕಡಾ 4.4ಕ್ಕೆ ಏರಿಕೆಯಾಗಿದೆ. ಏಪ್ರಿಲ್‌ನಲ್ಲಿ ಇದು 3.9 ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು.

ನ್ಯಾಷನಲ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ (ಎನ್ಬಿಎಸ್) ಸೋಮವಾರ ಬಿಡುಗಡೆ ಮಾಡಿದ ಅಂಕಿ ಅಂಶವು ವಿಶ್ಲೇಷಕರ ಮುನ್ಸೂಚನೆಗಿಂತ ಕೆಳಗಿದೆ. ಹೌದು ವಿಶ್ಲೇಷಕರು ಮೇ ತಿಂಗಳಿಗೆ ಶೇ. 5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಅಭಿಪ್ರಾಯಪಟ್ಟಿದ್ದರು. 

2020ರ ಮೊದಲ ಎರಡು ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಕೈಗಾರಿಕಾ ಉತ್ಪಾದನೆಯು ಶೇ. 13.5ರಷ್ಟು ಕುಸಿದಿತ್ತು. ನಂತರ ಮೂರು ಪ್ರಮುಖ ವಿಭಾಗಗಳಲ್ಲಿರುವ ವಿದ್ಯುತ್, ಶಾಖ, ಅನಿಲ ಮತ್ತು ನೀರಿನ ಉತ್ಪಾದನೆಯ ಬೆಳವಣಿಗೆ, ಮೇ ತಿಂಗಳಲ್ಲಿ ವರ್ಷಕ್ಕೆ 3.6ರಷ್ಟು ಏರಿಕೆಯಾಗಿದ್ದು, ಏಪ್ರಿಲ್‌ನಲ್ಲಿ ಶೇಕಡಾ 0.2 ರಷ್ಟು ಏರಿಕೆಯಾಗಿತ್ತು.

ಇದಲ್ಲದೆ, ಉತ್ಪಾದನೆಯು ಹಿಂದಿನ ತಿಂಗಳಿನ 5 ಪ್ರತಿಶತದ ಬೆಳವಣಿಗೆಗೆ ಹೋಲಿಸಿದರೆ ಮೇ ತಿಂಗಳಲ್ಲಿ ಶೇಕಡಾ 5.2 ರಷ್ಟು ಏರಿಕೆಯಾಗಿದೆ ಮತ್ತು ಗಣಿಗಾರಿಕೆ ಮೇ ತಿಂಗಳಲ್ಲಿ ಶೇಕಡಾ 1.1ರಷ್ಟು ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ