ಪಾಕ್ ಸ್ಟಾಕ್ ಎಕ್ಸ್ ಚೇಂಜ್ ಮೇಲೆ ಉಗ್ರರ ದಾಳಿ: 4 ಭಯೋತ್ಪಾದಕರು ಸೇರಿ 9 ಮಂದಿ ಸಾವು!
ಪಾಕಿಸ್ತಾನದ ಕರಾಚಿಯ ಸ್ಟಾಕ್ ಎಕ್ಸಚೇಂಜ್ ಆವರಣದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಉಗ್ರರು ಸೇರಿ 9 ಮಂದಿ ಮೃತಪಟ್ಟಿದ್ದಾರೆ.
ಕರಾಚಿ: ಪಾಕಿಸ್ತಾನದ ಕರಾಚಿಯ ಸ್ಟಾಕ್ ಎಕ್ಸಚೇಂಜ್ ಆವರಣದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಉಗ್ರರು ಸೇರಿ 9 ಮಂದಿ ಮೃತಪಟ್ಟಿದ್ದಾರೆ.
ಸ್ಟಾಕ್ ಎಕ್ಸಚೇಂಜ್ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಎಚ್ಚೇತ್ತ ಪೊಲೀಸರು ಆವರಣವನ್ನು ಸುತ್ತುವರಿಸಿ ಪ್ರತಿದಾಳಿ ನಡೆಸಿದರು. ಈ ವೇಳೆ ನಾಲ್ವರು ಉಗ್ರರು ಮೃತಪಟ್ಟಿದ್ದಾರೆ. ಇನ್ನು ಕಾರ್ಯಾಚರಣೆ ಮುಂದುವರೆದಿದೆ.
ಉಗ್ರರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಸ್ಟಾಕ್ ಎಕ್ಸಚೇಂಜ್ ಒಳಗೆ ನುಗ್ಗಿದ್ದರು. ನಂತರ ಮನಬಂದಂತೆ ಗುಂಡಿನ ಮಳೆಗೈದಿದ್ದಾರೆ. ಇದೇ ವೇಳೆ ಗ್ರೆನೇಡ್ ದಾಳಿ ಕೂಡ ನಡೆಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದು ಸಾವು-ನೋವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.