ಸಂಗ್ರಹ ಚಿತ್ರ 
ವಿದೇಶ

ಕೊರೋನಾ ವೈರಸ್: ಚೀನಾದಲ್ಲಿ 3,042 ದಾಟಿದ ಸಾವಿನ ಸಂಖ್ಯೆ

ಮಾರಣಾಂತಿಕ ಕೊರೋನಾ ವೈರಸ್ ನಿಂದಾಗಿ ತತ್ತರಿಸಿ ಹೋಗಿರುವ ಚೀನಾದಲ್ಲಿ ವೈರಸ್ ಗೆ ಬಲಿಯಾದವರ ಸಂಖ್ಯೆ 3,042ಕ್ಕೆ ಏರಿಕೆಯಾಗಿದೆ.

ಬೀಜಿಂಗ್: ಮಾರಣಾಂತಿಕ ಕೊರೋನಾ ವೈರಸ್ ನಿಂದಾಗಿ ತತ್ತರಿಸಿ ಹೋಗಿರುವ ಚೀನಾದಲ್ಲಿ ವೈರಸ್ ಗೆ ಬಲಿಯಾದವರ ಸಂಖ್ಯೆ 3,042ಕ್ಕೆ ಏರಿಕೆಯಾಗಿದೆ.

ಚೀನಾದಲ್ಲಿ ಬುಧವಾರ 31 ಮತ್ತು ಗುರುವಾರ 30 ಹೊಸ ಸಾವಿನ ಪ್ರಕರಣಗಳು ಸಂಭವಿಸಿದ್ದು, ಆ ಮೂಲಕ ಮಾರಣಾಂತಿಕ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 3,042 ಕ್ಕೆ ಏರಿಕೆಯಾಗಿದೆ. ಅಂತೆಯೇ ಕೊರೊನಾವೈರಸ್ ಸೋಂಕಿನ 139 ಹೊಸ ಪ್ರಕರಣಗಳ ವರದಿಗಳು ಬಂದಿದ್ದು, ಚೀನಾದಲ್ಲಿ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 80,552 ಕ್ಕೆ ತಲುಪಿದೆ ಎಂದು ಆರೋಗ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಅಂತೆಯೇ ಪ್ರಸ್ತುತ ಸಂಭವಿಸಿರುವ ಎಲ್ಲ ಸಾವುಗಳೂ ಕೊರೋನಾ ವೈರಸ್ ಕೇಂದ್ರ ಬಿಂದುವಾಗಿರುವ ಹುಬೈ ಪ್ರಾಂತ್ಯದಲ್ಲಿ ಸಂಭವಿಸಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಅಂತೆಯೇ ಚಿಕಿತ್ಸೆಯಿಂದ ಚೇತರಿಸಿಕೊಂಡ ನಂತರ ಬುಧವಾರ 2,189 ಜನರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದ್ದು, ತೀವ್ರತರವಾದ ಪ್ರಕರಣಗಳ ಸಂಖ್ಯೆ 464 ರಷ್ಟು ಇಳಿದು 5,952 ಕ್ಕೆ ತಲುಪಿದೆ.

ಚೇತರಿಸಿಕೊಂಡ ನಂತರ ಸುಮಾರು 52,045 ಜನರನ್ನು ಮನೆಗೆ ಕಳುಹಿಸಲಾಗಿದ್ದು, 25,352 ರೋಗಿಗಳು ಇನ್ನೂ ಸೋಂಕುನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 522 ಜನರು ಇನ್ನೂ ವೈರಸ್ ಸೋಂಕಿಗೆ ಒಳಗಾಗಿರುವ ಶಂಕೆ ಇದೆ ಎಂದು ಆಯೋಗ ತಿಳಿಸಿದೆ. ಬುಧವಾರದವರೆಗೆ ಹಾಂಕಾಂಗ್ ವಿಶೇಷ ಆಡಳಿತ ಪ್ರದೇಶದಲ್ಲಿ ಎರಡು ಸಾವು ಸೇರಿದಂತೆ 104 ಪ್ರಕರಣಗಳನ್ನು ದೃಢಪಡಿಸಲಾಗಿದೆ. ಮಕಾವೊ ನಲ್ಲಿ 10 ಪ್ರಕರಣಗಳು ದೃಢಪಟ್ಟರೆ, ತೈವಾನ್‌ನಲ್ಲಿ 42 ಪ್ರಕರಣಗಳು ವರದಿಯಾಗಿವೆ ಎಂದು ಆಯೋಗ ಹೇಳಿದೆ. ಚೇತರಿಸಿಕೊಂಡ ನಂತರ ಹಾಂಗ್ ಕಾಂಗ್‌ನಲ್ಲಿ 43, ಮಕಾವೊದಲ್ಲಿ 9 ಮತ್ತು ತೈವಾನ್‌ನಲ್ಲಿ 12 ರೋಗಿಗಳನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!