ಸಂಗ್ರಹ ಚಿತ್ರ 
ವಿದೇಶ

ಕೊರೋನಾ ವೈರಸ್ ವಿರುದ್ಧ ಸಾರ್ಕ್ ಕಾರ್ಯತಂತ್ರ: ಪ್ರಧಾನಿ ಮೋದಿ ಕರೆಗೆ ಪಾಕಿಸ್ತಾನದ ಪ್ರತಿಕ್ರಿಯೆ ಹೀಗಿದೆ...

ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಕರೆದಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹ್ವಾನಕ್ಕೆ ಪಾಕಿಸ್ತಾನದ ಧನಾತ್ಮಕ ಪ್ರತಿಕ್ರಿಯೆ ನೀಡಿದೆ. 

ನವದೆಹಲಿ: ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಕರೆದಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹ್ವಾನಕ್ಕೆ ಪಾಕಿಸ್ತಾನದ ಧನಾತ್ಮಕ ಪ್ರತಿಕ್ರಿಯೆ ನೀಡಿದೆ. 

ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಬಲವಾದ ಕಾರ್ಯತಂತ್ರವನ್ನು ಸಾರ್ಕ್ ರಾಷ್ಟ್ರಗಳ ನಾಯಕರು ರೂಪಿಸಬೇಕೆಂದು ಹೇಳಿದ್ದರು. ನಮ್ಮ ಜನರನ್ನು ಆರೋಗ್ಯವಾಗಿ ಇರಿಸುವ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಾನು ಚರ್ಚೆ ನಡೆಸಬಹುದು. ನಾವೆಲ್ಲಾ ಜೊತೆಯಾಗಿ ಇಡೀ ಜಗತ್ತಿಗೆ ಮಾದರಿಯೊಂದನ್ನು ಸೃಷ್ಟಿಸಬಹುದು. ಆರೋಗ್ಯಕರ ಜಗತ್ತು ರೂಪಿಸಲು ಕೊಡೂಗೆ ನೀಡಬಹುದು ಎಂದು ಹೇಳಿದ್ದರು. 

ಮೋದಿಯವರು ಈ ಪ್ರಸ್ತಾವಕ್ಕೆ ಭೂತಾನ್ ಪ್ರಧಾನಿ ಲೋತಾಯ್ ಶೆರಿಂಗ್, ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಬಾಂಗ್ಲಾದೇಶದ ಪ್ರದಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಮತ್ತು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸಾಲಿಹ್ ಅವರು ಬೆಬಲಿಸಿದ್ದರು. ಬಳಿಕ ಅಫ್ಘಾನಿಸ್ತಾನದ ಅಧ್ಯಕ್ಷರ ವಕ್ತಾರರು ಕೂಡ ಸ್ವಾಗತಿಸಿದ್ದರು. 

ಇದೀಗ ಮೋದಿಯವರ ಈ ಆಹ್ವಾನಕ್ಕೆ ಪಾಕಿಸ್ತಾನ ಕೂಡ ಧನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು, ಸಭೆಯಲ್ಲಿ ಭಾಗವಿಹಿಸುವುದಾಗಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ