ಆಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ವ್ಯಕ್ತಿಯಿಂದ ದಾಳಿ: 7 ಪೊಲೀಸರು ಸಾವು
ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಭಾನುವಾರ ತಾಲಿಬಾನ್ ಸಂಘಟನೆಗೆ ಸಹಾಯ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿಯೊಬ್ಬ ನಡೆಸಿದ ದಾಳಿಯಲ್ಲಿ ಏಳು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಫ್ಘಾನಿಸ್ತಾನ: ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಭಾನುವಾರ ತಾಲಿಬಾನ್ ಸಂಘಟನೆಗೆ ಸಹಾಯ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿಯೊಬ್ಬ ನಡೆಸಿದ ದಾಳಿಯಲ್ಲಿ 7 ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಕಾಲಮಾನ ಮಧ್ಯರಾತ್ರಿ 2 ಗಂಟೆ ವೇಳೆಗೆ ಜಾರಿ ಜಿಲ್ಲೆಯ ಚಾರ್ಷಾಕಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ ಎಂದು ಪ್ರಾಂತೀಯ ಪೊಲೀಸ್ ವಕ್ತಾರ ಜಮಾಲ್ ಬರಿಕ್ಜೈ ಕ್ಸಿನ್ಹುವಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ದಾಳಿ ನಡೆಸಿದ ನಂತರ ವ್ಯಕ್ತಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಅಪರಾಧಿಯನ್ನು ಬಂಧಿಸಲು ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.