ಕೊರೋನಾ ರೌದ್ರಾವತಾರ: ಇಟಲಿ, ಸ್ಪೇನ್ನಲ್ಲಿ ಒಂದೇ ದಿನ ಒಟ್ಟು 1,232 ಮಂದಿ ಬಲಿ, ಜಗತ್ತಿನಾದ್ಯಂತ 18,552 ಸಾವು!
ಸ್ಪೇನ್ ಮತ್ತು ಇಟಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1,232 ಮಂದಿ ಬಲಿಯಾಗಿದ್ದಾರೆ. ಇನ್ನು ಜಗತ್ತಿನಾದ್ಯಂತ ಸಾವಿನ ಸಂಖ್ಯೆ 18,552ಕ್ಕೆ ಏರಿಕೆಯಾಗಿದೆ.
ನವದೆಹಲಿ: ಸ್ಪೇನ್ ಮತ್ತು ಇಟಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1,232 ಮಂದಿ ಬಲಿಯಾಗಿದ್ದಾರೆ. ಇನ್ನು ಜಗತ್ತಿನಾದ್ಯಂತ ಸಾವಿನ ಸಂಖ್ಯೆ 18,552ಕ್ಕೆ ಏರಿಕೆಯಾಗಿದೆ.
ಇಟಲಿಯಲ್ಲಿ 743 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 6820ಕ್ಕೇರಿದೆ. ಇನ್ನು ಸ್ಪೇನ್ ನಲ್ಲಿ 489 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 2,800ಕ್ಕೇರಿದೆ. ಇನ್ನು ಜಗತ್ತಿನಾದ್ಯಂತ ಸಾವಿನ ಸಂಖ್ಯೆ 18,552 ಮಂದಿ ಬಲಿಯಾಗಿದ್ದಾರೆ.
ಇಂದು ವಿಶ್ವದಾದ್ಯಂತ 35,879 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟಾರೆ 414,661 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.
ಭಾರತದಲ್ಲಿ ಇಂದು ಹೊಸದಾಗಿ 37 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 536ಕ್ಕೇರಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.