ಪಾಕ್ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್, ಕುಟುಂಬಕ್ಕೂ ತಟ್ಟಿದ ಕೊರೋನಾ
ಕೊರೋನಾ ವೈರಸ್ ಮಟ್ಟಹಾಕಲು ಪಾಕಿಸ್ತಾನ ಹೆಣಗಾಡುತ್ತಿದ್ದು, ಈ ನಡುವಲ್ಲೇ ಪಾಕಿಸ್ತಾನದ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇಸ್ಲಾಮಾಬಾದ್: ಕೊರೋನಾ ವೈರಸ್ ಮಟ್ಟಹಾಕಲು ಪಾಕಿಸ್ತಾನ ಹೆಣಗಾಡುತ್ತಿದ್ದು, ಈ ನಡುವಲ್ಲೇ ಪಾಕಿಸ್ತಾನದ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಅಸಾದ್ ಕೈಸರ್ ಸೇರಿದಂತೆ ಅವರ ಪುತ್ರ ಹಾಗೂ ಪುತ್ರಿಗೂ ವೈರಸ್ ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ.
ವೈದ್ಯಕೀಯ ವರದಿಯಲ್ಲಿ ವೈರಸ್ ದೃಢಪಟ್ಟಿದ್ದು, ಮನೆಯಲ್ಲಿ ಸ್ವಯಂ ದಿಗ್ಭಂಧನದಲ್ಲಿದ್ದೇನೆಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೈಸರ್ ಅವರು ಹೇಳಿಕೊಂಡಿದ್ದಾರೆ.
ಪಾಕಿಸ್ತಾನದಲ್ಲಿ ಈ ವರೆಗೂ 16,817 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 385 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 4,315 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.