ರಷ್ಯಾ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ 
ವಿದೇಶ

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್'ಗೂ ತಗುಲಿದ ಮಹಾಮಾರಿ ಕೊರೋನಾ!

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ರಷ್ಯಾದ ಪ್ರಧಾನಮಂತ್ರಿ ಮಿಖಾಯಿಲ್ ಮಿಶುಸ್ಟಿನ್'ಗೂ ಮಹಾಮಾರಿ ಕೊರೋನಾ ವೈರಸ್ ತಗುಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮಾಸ್ಕೋ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ರಷ್ಯಾದ ಪ್ರಧಾನಮಂತ್ರಿ ಮಿಖಾಯಿಲ್ ಮಿಶುಸ್ಟಿನ್'ಗೂ ಮಹಾಮಾರಿ ಕೊರೋನಾ ವೈರಸ್ ತಗುಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಸ್ವತಃ ಮಿಖಾಯಿಲ್ ಅವರೇ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ಸ್ವಯಂ ದಿಗ್ಬಂಧನಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆಂದು ಹೇಳಿದ್ದಾರೆ. 

ನನಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂ ದಿಗ್ಭಂದನಕ್ಕೆ ಗುರಿಯಾಗಿರುವುದಾಗಿ ಮಿಖಾಯಿಲ್ ತಿಳಿಸಿದ್ದಾರೆ. 

ಈ ಕುರಿತು ರಷ್ಯಾ ಅದ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್, ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಹಾಗೂ ಸ್ವಯಂ ದಿಗ್ಭಂಧನದಲ್ಲಿರುವುದಾಗಿ ಹೇಳಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಇದಕ್ಕೆ ಪುಟಿನ್ ಅವರು, ಮಿಖಾಯಿಲ್ ಅವರು ಶೀಘ್ರಗತಿಯಲ್ಲಿ ಚೇತರಿಕೆ ಕಂಡು, ಸರ್ಕಾರದ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತಾಗಲಿ ಎಂದು ಶುಭ ಕೋರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ