ಸಂಗ್ರಹ ಚಿತ್ರ 
ವಿದೇಶ

2020ರ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ: ಡೊನಾಲ್ಡ್ ಟ್ರಂಪ್

2020 ವರ್ಷ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾ ವೈರಸ್'ಗೆ ಲಸಿಕೆ ಬರುವ ವಿಶ್ವಾಸವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. 

ವಾಷಿಂಗ್ಟನ್: 2020 ವರ್ಷ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾ ವೈರಸ್'ಗೆ ಲಸಿಕೆ ಬರುವ ವಿಶ್ವಾಸವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. 

ಫಾಕ್ಸ್ ನ್ಯೂಸ್'ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ವರ್ಷಾಂತ್ಯದೊಳಗೆ ಕೊರೋನಾ ನಿರ್ಮೂಲನಾ ಲಸಿಕೆ ನಮ್ಮ ಕೈ ಸೇರಲಿದೆ. ಈ ಬಗ್ಗೆ ನನಗೆ ವಿಶ್ವಾಸವಿದೆ. 

ಅಮೆರಿಕಾದಲ್ಲಿ ಸಂಶೋಧಕರು ಈಗಾಗಲೇ ಲಸಿಕೆ ಕಂಡು ಹಿಡಿಯುವ ಪ್ರಯತ್ನದಲ್ಲಿದ್ದಾರೆ. ಒಂದೇ ವೇಳೆ ಬೇರೆ ದೇಶದ ಸಂಶೋಧಕರು ಔಷಧಿ ಕಂಡುಹಿಡಿದರೆ, ನಮಗೂ ಸಂತೋಷವಾಗಲಿದ್ದು, ಅವರಿಗೆ ನನ್ನ ಟೋಪಿ ತೆಗೆದು ಧನ್ಯವಾದಗಳನ್ನ ತಿಳಿಸುತ್ತೇನೆ. ಇಂತಹ ಸಂದರ್ಭದಲ್ಲಿ ಲಸಿಕೆ ಕಂಡು ಹಿಡಿಯುವುದೊಂದೇ ನಮ್ಮ ಧ್ಯೇಯ ಎಂದು ಹೇಳಿದ್ದಾರೆ. 

ಕೊರೋನಾ ವೈರಸ್ ಮಟ್ಟಹಾಕಲು ಅಮೆರಿಕಾ ಕಂಗಾಲಾಗಿದ್ದು, ಈವರೆಗೂ 68,000 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 11,71,350 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ: ವಿಂಡೀಸ್ ವಿರುದ್ಧ ಗೆಲುವು; T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್