ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಕೊರೋನಾ ವೈರಸ್: ಮೊದಲ ಬಾರಿಗೆ ಅಮೆರಿಕದಲ್ಲಿ ಕನಿಷ್ಟ ಸೋಂಕಿತರ ಸಂಖ್ಯೆ!

ಮಾರಕ ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿದ್ದ ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಪ್ರಮಾಣ ಹೊಸ ಸೋಂಕಿತರ ಸಂಖ್ಯೆ ಕಂಡುಬಂದಿದೆ.

ಅಮೆರಿಕದಲ್ಲಿ ಕೊರೋನಾ ವೈರಸ್ ಆರ್ಭಟ
Srinivasa Murthy VN
Updated On : 5 May 2020, 8:11 am

ವಾಷಿಂಗ್ಟನ್: ಮಾರಕ ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿದ್ದ ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಪ್ರಮಾಣ ಹೊಸ ಸೋಂಕಿತರ ಸಂಖ್ಯೆ ಕಂಡುಬಂದಿದೆ.

ನಿನ್ನೆ ಒಂದೇ ದಿನ ಅಮೆರಿಕದಲ್ಲಿ 1,015 ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಂದಿತ್ತು. ಇದು ಅಮೆರಿಕದಲ್ಲಿ ದಾಖಲಾದ ಒಂದು ದಿನದ ಕನಿಷ್ಠ ಸೋಂಕಿತರ ಪ್ರಮಾಣವಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ನೀಡಿದೆ.

ಕಳೆದ ಒಂದು ತಿಂಗಳಿನಿಂದ ಅಮೆರಿಕದಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿತ್ತು. ಆದರೆ ನಿನ್ನೆ ಕೊಂಚ ತಗ್ಗಿದ್ದು ತಿಂಗಳಲ್ಲೇ ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಕನಿಷ್ಠ ಹೊಸ ಸೋಂಕಿತರ ಪ್ರಮಾಣ ದಾಖಲಾಗಿದೆ. ಅಂತೆಯೇ ಅಮೆರಿಕದಲ್ಲಿ ಈ ವರೆಗೂ ಕೊರೋನಾ ವೈರಸ್ ಗೆ  68,689ಮಂದಿ ಬಲಿಯಾಗಿದ್ದಾರೆ.

Advertisement

Advertisement

ಇದೇ ವಿಚಾರವಾಗಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಅಮೆರಿಕದಲ್ಲಿ ಕೊರೋನಾ ವೈರಸ್ ಗೆ ಕನಿಷ್ಠ 1 ಲಕ್ಷದಿಂದ 2.5 ಲಕ್ಷದವರೆಗೂ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. 

Related Article

ಅಮೆರಿಕದಲ್ಲಿ ಒಂದು ಲಕ್ಷ ಮಂದಿ ಕೊರೋನಾ ವೈರಸ್ ನಿಂದ ಸಾಯುವ ಸಾಧ್ಯತೆ: ಡೊನಾಲ್ಡ್ ಟ್ರಂಪ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments