ಡೊನಾಲ್ಡ್ ಟ್ರಂಪ್ 
ವಿದೇಶ

ಪ್ರತಿದಿನ ಡೊನಾಲ್ಡ್ ಟ್ರಂಪ್ ಗೆ ಕೊರೋನಾ ಪರೀಕ್ಷೆ; ಅಧ್ಯಕ್ಷರ ಮಿಲಿಟರಿ ಸಹಾಯಕನಿಗೆ ಸೋಂಕು

ತಮ್ಮ ಮಿಲಿಟರಿ ಸಹಾಯಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಪ್ರತಿದಿನ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್: ತಮ್ಮ ಮಿಲಿಟರಿ ಸಹಾಯಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಪ್ರತಿದಿನ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಖಾಸಗಿ ಭದ್ರತಾ ಸಹಾಯಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಆತನೊಂದಿಗೆ ಅಧ್ಯಕ್ಷರು ತೀರಾ ಹತ್ತಿರದ ಸಂಪರ್ಕ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ. ''ಆತನೊಂದಿಗೆ ನಾನು ಹತ್ತಿರದ ಸಂಪರ್ಕ ಹೊಂದಿರಲಿಲ್ಲ. ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿದೆ. ಆದರೂ ಸುರಕ್ಷತೆ ದೃಷ್ಟಿಯಿಂದ ನಾನು, ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಶ್ವೇತಭವನದ ಇತರ ಸಿಬ್ಬಂದಿಗಳು ಪ್ರತಿದಿನ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ನಿನ್ನೆ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ನಿನ್ನೆ ಮತ್ತು ಇಂದು ನಾನು ಮತ್ತು ಮೈಕ್ ಪೆನ್ಸ್ ಕೊರೋನಾ ಪರೀಕ್ಷೆ ಮಾಡಿಸಿಕೊಂಡೆವು. ಎರಡು ಬಾರಿ ಕೂಡ ನೆಗೆಟಿವ್ ಬಂದಿದೆ. ವಾರಕ್ಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಸೋಂಕು ಬಂದಿದ್ದರೆ ಕೂಡಲೇ ಪತ್ತೆಯಾಗಲಿಕ್ಕಿಲ್ಲ ಎಂದು ಪ್ರತಿದಿನ ಮಾಡಿಸಿಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Uttarakhand helicopter crash: ಛಿದ್ರ ಛಿದ್ರವಾಗಿ ಬಿದ್ದ ಹೆಲಿಕಾಪ್ಟರ್, ಸುಟ್ಟುಕರಕಲಾದ ಸ್ಥಿತಿಯಲ್ಲಿ ಐವರು ಕನ್ನಡಿಗರು ಸೇರಿದಂತೆ ಆರು ಮೃತದೇಹಗಳು ಪತ್ತೆ!

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ! ಬೆಂಗಳೂರು ಮೂಲದ ಐವರು ಪ್ರಯಾಣಿಕರು ಸೇರಿದಂತೆ ಆರು ಮಂದಿ ಸಾವು, VIDEO

ನಟಿ Nora Fatehiಗೆ ಮತ್ತೆ ಸಂಕಷ್ಟ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣದಲ್ಲಿ ಪೊಲೀಸ್ ಸಮನ್ಸ್!

ಭಾನುವಾರ ಬೆಂಗಳೂರು - ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ; ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು ಮೆಟ್ರೋ ಕಿರುಕುಳ ಆರೋಪ: ಸೌಪಿಕ ಇನ್‌ಸ್ಟಾಗ್ರಾಂ ಖಾತೆಗೆ ಭರ್ಜರಿ ಫಾಲೋವರ್ಸ್, ₹399ಗೆ Paid Subscription ಆರಂಭ?