ಹಂದ್ವಾರ ದಾಳಿಯ ಹುತಾತ್ಮ ಯೋಧರು 
ವಿದೇಶ

ಹಂದ್ವಾರ ದಾಳಿಗೆ ಹೊಣೆ ಹೊತ್ತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ, ಭಾರತದ್ದೇ ಕೈ ಮೇಲಾಯಿತು ಎಂದ ಉಗ್ರರು! 

ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಯೋತ್ಪಾದಕರ ಎನ್ ಕೌಂಟರ್ ನಡೆದು 5 ದಿನಗಳು ಕಳೆದ ಬಳಿಕ ಅಲ್ಲಿನ ಘಟನಾವಳಿಗಳಿಗೆ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಹೊಣೆ ಹೊತ್ತಿದೆ. 

ನವದೆಹಲಿ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಯೋತ್ಪಾದಕರ ಎನ್ ಕೌಂಟರ್ ನಡೆದು 5 ದಿನಗಳು ಕಳೆದ ಬಳಿಕ ಅಲ್ಲಿನ ಘಟನಾವಳಿಗಳಿಗೆ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಹೊಣೆ ಹೊತ್ತಿದೆ. 

ಪಾಕಿಸ್ತಾನದ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರ ವಿರುದ್ಧ ಹಂದ್ವಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು. ಈ ಘಟನೆಯ ಬಗ್ಗೆ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಾಹುದ್ದೀನ್ ಮಾತನಾಡಿರುವ ವಿಡಿಯೋವನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಹಂದ್ವಾರ ಘಟನೆಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರರೇ ಕಾರಣ ಎಂದು ಹೇಳಿರುವ ಸಯೀದ್ ಸಲಾಹುದ್ದೀನ್, ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೇಲುಗೈ ಸಾಧಿಸಿದೆ ಎಂದೂ ಹೇಳಿದ್ದಾನೆ. 

ಹಂದ್ವಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೇಲುಗೈ ಸಾಧಿಸಿದ್ದು, ಆಘಾತಕಾರಿಯಾಗಿದೆ. ಆದರೆ ಕಾಶ್ಮೀರದಲ್ಲಿ ಬಲಿದಾನ ಬಹಳ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಹಂದ್ವಾರದಲ್ಲಿ ಮುಜಾಹಿದ್ದೀನ್ ಗಳು ಶತೃಗಳ(ಭಾರತೀಯ ಸೇನೆ) ಬೆನ್ನು ಮೂಳೆ ಮುರಿದಿದ್ದರು. ಆದರೆ ಭಾರತೀಯ ಸೇನೆಯದ್ದೇ ಮೇಲುಗೈ ಆಗಿದೆ ಎಂದು ಸಯೀದ್ ಸಲಾಹುದ್ದೀನ್ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.    

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ