ವಿದೇಶ

ಸಿಹಿ ಸುದ್ದಿ: ಕೊರೊನಾ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ: ಡೊನಾಲ್ಡ್ ಟ್ರಂಪ್

Vishwanath S

ವಾಷಿಂಗ್ಟನ್: ಕೊರೋನಾ ವೈರಸ್ ಸೋಂಕು ತಗುಲದಂತೆ ತೆಗೆದುಕೊಳ್ಳಬಹುದಾದ ಲಸಿಕೆಯ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ ನಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಬೆಳಗ್ಗೆ ಅವರು ಈ ವರ್ಷಾಂತ್ಯದ ವೇಳೆಗೆ ಕೋವಿಡ್ 19ರ ಲಸಿಕೆ ಸಿಗಲಿದೆ ಎಂದು ಹೇಳಿದ್ದಾರೆ.  ಆಪರೇಷನ್ ವಾರ್ಡ್ ಸ್ಪೀಡ್ ಎಂಬ ಉಪಕ್ರಮವನ್ನು ಆರಂಭಿಸಿ 2021ರ ಜನವರಿ ವೇಳೆಗೆ ಲಸಿಕೆ ಸಿದ್ಧಪಡಿಸುವ ಕಾರ್ಯ ನಡೆಯಲಿದೆ ಎಂದು ಟ್ರಂಪ್ ಹೇಳಿದ್ದರು.

ಶುಕ್ರವಾರ ಸಂಜೆ ವೇಳೆಗೆ ಅಮೆರಿಕದಲ್ಲಿ 15 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು 88,550 ಜನರು ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

SCROLL FOR NEXT