ಕೋವಿಡ್-19 ಭೀತಿ: ಮಲೇರಿಯಾ ವಿರೋಧಿ ಔಷಧ ತೆಗೆದುಕೊಳ್ಳುತ್ತಿದ್ದೀನಿ ಎಂದ ಡೊನಾಲ್ಡ್ ಟ್ರಂಪ್
ಕೋವಿಡ್-19 ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮಲೇರಿಯಾ ವಿರೋಧಿ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ನ್ನು ತೆಗೆದುಕೊಳ್ಳುತ್ತಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ವಾಷಿಂಗ್ಟನ್: ಕೋವಿಡ್-19 ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮಲೇರಿಯಾ ವಿರೋಧಿ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ನ್ನು ತೆಗೆದುಕೊಳ್ಳುತ್ತಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸುಮಾರು ಒಂದೂವರೆ ವಾರದಿಂದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧವನ್ನು ತೆಗೆದುಕೊಳ್ಳುತ್ತಿರುವುದಾಗಿ ಶ್ವೇತಭವನದಲ್ಲಿ ಸುದ್ದಿಗಾರರಿಗೆ ಡೊನಾಲ್ಡ್ ಟ್ರಂಪ್ ತಿಳಿಸಿದರು.
ಕಳೆದ ಮೂರು ತಿಂಗಳಿನಿಂದ ಅಮೆರಿಕಾದಲ್ಲಿ 90 ಸಾವಿರ ಜನರನ್ನು ಬಲಿಪಡೆದುಕೊಂಡಿರುವ ಕೋವಿಡ್-19 ಸೋಂಕಿನ ಸಣ್ಣ ಲಕ್ಷಣಗಳು ಕೂಡಾ ತಮ್ಮಗಿಲ್ಲ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿದ್ದು, ಅವರು ಯಾವುದನ್ನೂ ಶಿಫಾರಸು ಮಾಡಿಲ್ಲ, ಆದರೆ, ಪ್ರತಿದಿನ ಮಲೇರಿಯಾ ವಿರುದ್ಧದ ಔಷಧ ತೆಗೆದುಕೊಳ್ಳುತ್ತೇನೆ. ಕೆಲ ಸಮಯ ಆದ ನಂತರ ನಿಲ್ಲಿಸುತ್ತೇನೆ. ನಾನು ಚಿಕಿತ್ಸೆ ಅಥವಾ ಲಸಿಕೆ ಕಂಡುಹಿಡಿಯಲು ಬಯಸುತ್ತೇನೆ. ಅದು ಶೀಘ್ರದಲ್ಲಿಯೇ ಆಗಲಿದೆ ಎಂದು ಟ್ರಂಪ್ ಭರವಸೆ ವ್ಯಕ್ತಪಡಿಸಿದ್ದಾರೆ.
ಔಷಧವನ್ನು ತೆಗೆದುಕೊಳ್ಳುತ್ತಿರುವುದಾಗಿ ಟ್ರಂಪ್ ಹೇಳಿಕೆ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷರ ಆರೋಗ್ಯ ಚೆನ್ನಾಗಿರುವುದಾಗಿ ಶ್ವೇತಭವನದ ವೈದ್ಯರು ಸ್ಪಷ್ಪಪಡಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.