ಅಮೆರಿಕಾದಲ್ಲಿ ಕೊರೋನಾ ಆರ್ಭಟ: ಮತ್ತೆ 1,500 ಮಂದಿ ಸಾವು, 91,845 ತಲುಪಿದ ಮೃತರ ಸಂಖ್ಯೆ
ಕೊರೋನಾ ಹೊಡೆತಕ್ಕೆ ಅಮೆರಿಕಾ ನಲುಗಿ ಹೋಗಿದ್ದು, ಕಳೆದ 24 ಗಂಟೆಗಳ್ಲಿ ಮತ್ತೆ 1,500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಅಮೆರಿಕಾದಲ್ಲಿ ಹೆಮ್ಮಾರಿ ವೈರಸ್'ಗೆ ಸಾವನ್ನಪ್ಪಿದ್ದವರ ಸಂಖ್ಯೆ 91,845ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ.
ವಾಷಿಂಗ್ಟನ್: ಕೊರೋನಾ ಹೊಡೆತಕ್ಕೆ ಅಮೆರಿಕಾ ನಲುಗಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ 1,500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಅಮೆರಿಕಾದಲ್ಲಿ ಹೆಮ್ಮಾರಿ ವೈರಸ್'ಗೆ ಸಾವನ್ನಪ್ಪಿದ್ದವರ ಸಂಖ್ಯೆ 91,845ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ.
ಇನ್ನು ಸೋಂಕಿತರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈವರೆಗೂ 15 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಈ ನಡುವೆ 15 ಲಕ್ಷ ಸೋಂಕಿತರ ಪೈಕಿ 3 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ನ್ಯೂಯಾರ್ಕ್ ನಗರವೊಂದರಲ್ಲಿಯೇ 3 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 28 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.