ಕೊರೋನಾ 2ನೇ ಹಂತ ಎದುರಾದರೂ ಅಮೆರಿಕಾದಲ್ಲಿ ಲಾಕ್ ಡೌನ್ ಮಾಡಲ್ಲ: ಟ್ರಂಪ್
ಮಾಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಅಮೆರಿಕದಲ್ಲಿ ಅದಾಗಲೇ 96 ಸಾವಿರ ಮಂದಿ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 16 ಲಕ್ಷ ದಾಟಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತ್ರ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.
ವಾಷಿಂಗ್ಟನ್: ಮಾಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಅಮೆರಿಕದಲ್ಲಿ ಅದಾಗಲೇ 96 ಸಾವಿರ ಮಂದಿ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 16 ಲಕ್ಷ ದಾಟಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತ್ರ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.
ದೇಶದಲ್ಲಿ ಒಂದೊಮ್ಮೆ ಕೊರೋನಾ ವೈರಸ್ ಹಾವಳಿಯ ಎರಡನೇ ಹಂತ ಎದುರಾದರೂ ಯಾವುದೇ ಕಾರಣಕ್ಕೂ ಲಾಕ್ ಡೌನ್ ನಿರ್ಬಂಧಗಳನ್ನು ಜಾರೊಗೊಳಿಸುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಎರಡನೇ ಹಂತ ಎದುರಾಗುವುದು ವಿಭಿನ್ನ ಸಾಧ್ಯತೆ ಎಂದು ಜನರು ಹೇಳುತ್ತಿದ್ದಾರೆ. ಇದು ಪ್ರಮಾಣಿತವಾಗಿದೆ. ನಾವು ಬೆಂಕಿಯನ್ನು ನಂದಿಸಲಿದ್ದೇವೆ. ಆದರೆ, ದೇಶವನ್ನು ಮುಚ್ಚಲು ಹೋಗುವುದಿಲ್ಲ ಎಂದು ಟ್ರಂಪ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮಿಚಿಗನ್ ರಾಜ್ಯದ ಫೋರ್ಡ್ ಉತ್ಪಾದನಾ ಘಟಕದ ಪ್ರವಾಸದ ಸಮಯದಲ್ಲಿ ಮಾಧ್ಯಮ ಪ್ರಶ್ನೆಗಳಿಗೆ ಈ ಉತ್ತರ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.