ಸಂಗ್ರಹ ಚಿತ್ರ 
ವಿದೇಶ

ಲಡಾಖ್'ನಲ್ಲಿ ಭಾರತ-ಚೀನಾ ಸಂಘರ್ಷ: ಭಾರತೀಯ ಯೋಧರನ್ನು ವಶಕ್ಕೆ ಪಡೆದುಕೊಂಡಿರುವ ಚೀನಾ

ಲಡಾಖ್'ನಲ್ಲಿ ಭಾರತ ಮತ್ತು ಚೀನಾ ಯೋಧರ ಗುದ್ದಾಟ ತೀವ್ರಗೊಂಡಿದ್ದು, ಕಳೆದ ವಾರ ಕೆಲ ಭಾರತೀಯ ಯೋಧರನ್ನು ಚೀನಾ ಸೇನೆ ಹಲವು ಗಂಟೆಗಳ ಕಾಲ ತನ್ನ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ ಘಟನೆ ಇದೀಗ ಬೆಳಕಿಗೆ ಬಂದಿದೆ. 

ನವದೆಹಲಿ; ಲಡಾಖ್'ನಲ್ಲಿ ಭಾರತ ಮತ್ತು ಚೀನಾ ಯೋಧರ ಗುದ್ದಾಟ ತೀವ್ರಗೊಂಡಿದ್ದು, ಕಳೆದ ವಾರ ಕೆಲ ಭಾರತೀಯ ಯೋಧರನ್ನು ಚೀನಾ ಸೇನೆ ಹಲವು ಗಂಟೆಗಳ ಕಾಲ ತನ್ನ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ ಘಟನೆ ಇದೀಗ ಬೆಳಕಿಗೆ ಬಂದಿದೆ. 

ಲಡಾಖ್'ನ ಪ್ಯಾಂಗ್ಯಾಂಗ್ ಸರೋವರದ ಬಳಿ ಹವು ದಿನಗಳಿಂದ ಬೀಡು ಬಿಟ್ಟಿರುವ ಚೀನಾ ಸೇನೆ, ಕಳೆದ ಬುಧವಾರ ಭಾರತದ ಗಡಿಯೊಳಗೆ ನುಗ್ಗಿ ಭಾರತದ ನೆಲದಲ್ಲಿ ಓಡಾಟ ನಡೆಸಿದೆ. ಈ ವೇಳೆ ಭಾರತೀಯ ಯೋಧರು ಆಕ್ಷೇಪ ವ್ಯಕ್ತಪಡಿಸಿದಾಗ ಹೆಚ್ಚಿನ ಸಂಖ್ಯೆಯಲ್ಲಿದ್ದ ಚೀನಾ ಯೋಧರು ಭಾರತೀಯ ಯೋಧರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಬಳಿಕ ಮರಳಿಸಿದ್ದಾರೆ. 

ಈ ವಿಚಾರ ಕೈಮೀರುವ ಹಂತಕ್ಕೆ ತಲುಪುತ್ತಲೇ ಉಭಯ ದೇಶಗಳ ಕಮಾಂಡರ್ ಗಳು ಮಾತುಕತೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಳಿಕ ಭಾರತೀಯ ಯೋಧರನ್ನು ಬಿಡುಗಡೆ ಮಾಡಲಾಯಿತು ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!