ಕೊರೋನಾ ವಜ್ರಮುಷ್ಠಿಯಲ್ಲಿ ಇಡೀ ವಿಶ್ವ: 55 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 3.43 ಲಕ್ಷ ಮಂದಿ ಸಾವು
ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 3.43 ಲಕ್ಷ ಜನರು ಹೆಮ್ಮಾರಿ ವೈರಸ್'ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ.
ವಾಷಿಂಗ್ಟನ್: ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 3.43 ಲಕ್ಷ ಜನರು ಹೆಮ್ಮಾರಿ ವೈರಸ್'ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 99,780ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರತೀನಿತ್ಯ ಪಾಸಿಟಿವ್ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಲೇ ಇದೆ.
ಪ್ರಸ್ತುತ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 5,404,512ಕ್ಕೆ ಏರಿಕೆಯಾಗಿದ್ದು, ಸಾವನ್ನಪ್ಪಿದ್ದವರ ಸಂಖ್ಯೆ 343,514ಕ್ಕೆ ತಲುಪಿದೆ.
ಅಮೆರಿಕಾ ಒಂದರಲ್ಲಿಯೇ 143,739 ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, 2,454,452 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.