ವಿದೇಶ

ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ 

Nagaraja AB

ಇಸ್ಲಾಮಾಬಾದ್:  ಪಾಕಿಸ್ತಾನದ ಪ್ರಧಾನಿ ಇಮ್ರಾನ್  ಖಾನ್ ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಹಿಂದೂಗಳಿಗೆ ಶುಭಾಶಯವನ್ನು ಕೋರಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ನಮ್ಮ ಎಲ್ಲಾ ಹಿಂದೂ ನಾಗರಿಕರಿಗೆ ದೀಪಾವಳಿ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಪಾಕಿಸ್ತಾನದಲ್ಲಿನ ಹಿಂದೂಗಳು ತಮ್ಮ ಮನೆಗಳು ಹಾಗೂ ದೇವಾಲಯಗಳನ್ನು ವರ್ಣರಂಜಿತ ದೀಪಗಳಿಂದ ಅಲಂಕರಿಸಿ,  
ದೇಶಾದ್ಯಂತ ಉತ್ಸಾಹ ಹಾಗೂ ಸಡಗರದಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ. ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದ್ದು, ಜನರಿಗೆ ಸಿಹಿ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಕರಾಚಿ, ಲಾಹೋರ್ ಮತ್ತು ಇತರ ಪ್ರಮುಖ ನಗರಗಳಲ್ಲದೆ, ಮಾಟಿಯಾರಿ, ಟ್ಯಾಂಡೋ ಅಲ್ಲಾಹಾರ್, ತಾಂಡೋ ಮಹಮ್ಮದ್ ಖಾನ್, ಶಹಾದ್‌ಪುರ ಮತ್ತಿತರ ಕಡೆಗಳಲ್ಲಿ ಉತ್ಸವಗಳು ನಡೆಯಲಿವೆ ಎಂದು ವರದಿ ತಿಳಿಸಿದೆ.

ಪಾಕಿಸ್ತಾನದಲ್ಲಿ ಹಿಂದೂಗಳು ಅತ್ಯಂತ ಅಲ್ಪಸಂಖ್ಯಾತ ಸಮುದಾಯವಾಗಿದ್ದಾರೆ. ಅಧಿಕೃತ ಅಂದಾಜಿನ ಪ್ರಕಾರ, 75 ಲಕ್ಷ ಹಿಂದೂಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. ಆದಾಗ್ಯೂ, ಈ ಸಮುದಾಯದ ಪ್ರಕಾರ ಸುಮಾರು 90 ಲಕ್ಷ ಹಿಂದೂಗಳು ನೆಲೆಸಿರುವುದಾಗಿ ಹೇಳುತ್ತಾರೆ.

ಪಾಕಿಸ್ತಾನದ ಬಹುಪಾಲು ಹಿಂದೂ ಜನಸಂಖ್ಯೆಯು ಸಿಂಧ್ ಪ್ರಾಂತ್ಯದಲ್ಲಿ ನೆಲೆಸಿದ್ದು, ಅಲ್ಲಿನ ಮುಸ್ಲಿಂ ಸಹೋದ್ಯೋಗಿಗಳೊಂದಿಗೆ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಭಾಷೆಯನ್ನು ಹಂಚಿಕೊಳ್ಳುತ್ತಾರೆ.

SCROLL FOR NEXT