ಜೋ ಬೈಡನ್ ಸಂಪುಟದಲ್ಲಿ ಇಬ್ಬರು ಭಾರತೀಯ-ಅಮೆರಿಕನ್ನರಿಗೆ ಪ್ರಮುಖ ಸ್ಥಾನ 
ವಿದೇಶ

ಜೋ ಬೈಡನ್ ಸಂಪುಟದಲ್ಲಿ ಇಬ್ಬರು ಭಾರತೀಯ ಅಮೆರಿಕನ್ನರಿಗೆ ಪ್ರಮುಖ ಸ್ಥಾನ

ಅಮೆರಿಕದ ನಿಯೋಜಿತ ನೂತನ ಅಧ್ಯಕ್ಷ ಜೋ ಬೈಡನ್ ಸಚಿವ ಸಂಪುಟದಲ್ಲಿ ಇಬ್ಬರು ಭಾರತೀಯ ಅಮೆರಿಕನ್ನರಿಗೆ ಪ್ರಮುಖ ಖಾತೆಗಳು ಲಭ್ಯವಾಗಲಿದೆ.

ವಾಷಿಂಗ್ ಟನ್: ಅಮೆರಿಕದ ನಿಯೋಜಿತ ನೂತನ ಅಧ್ಯಕ್ಷ ಜೋ ಬೈಡನ್ ಸಚಿವ ಸಂಪುಟದಲ್ಲಿ ಇಬ್ಬರು ಭಾರತೀಯ ಅಮೆರಿಕನ್ನರಿಗೆ ಪ್ರಮುಖ ಖಾತೆಗಳು ಲಭ್ಯವಾಗಲಿದೆ. 

ಅಲ್ಲಿನ ಮಾಧ್ಯಮಗಳ ವರದಿಗಳ ಪ್ರಕಾರ ಅಮೆರಿಕದ ಸರ್ಜನ್ ಜನರಲ್ ವಿವೇಕ್ ಮೂರ್ತಿ ಹಾಗೂ ಸ್ಟ್ಯಾಂಡ್ ಫೋರ್ಡ್ ವಿವಿಯ ಪ್ರೊಫೆಸರ್ ಆಗಿರುವ ಅರುಣ್ ಮಜುಮ್ದಾರ್ ಅವರಿಗೆ ಜೋ ಬೈಡನ್-ಕಮಲ ಹ್ಯಾರಿಸ್ ಆಡಳಿತದಲ್ಲಿ ಪ್ರಮುಖ ಖಾತೆಗಳು ಲಭ್ಯವಾಗಲಿದೆ. 

ವಿವೇಕ್ ಮೂರ್ತಿ ಕೋವಿಡ್-19 ಗೆ ಸಂಬಂಧಿಸಿದಂತೆ ಈಗಾಗಲೇ ಜೋ ಬೈಡನ್ ಅವರ ಪ್ರಮುಖ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ, ಇವರಿಗೆ ಅಮೆರಿಕದ ಆರೋಗ್ಯ ಹಾಗೂ ಮಾನವ ಸೇವೆಗಳ ಖಾತೆಯ ಹೊಣೆಗಾರಿಕೆ ಸಿಗಲಿದೆ ಹಾಗೂ ಸ್ಟ್ಯಾಂಡ್ ಫೋರ್ಡ್ ವಿವಿಯ ಪ್ರೊಫೆಸರ್ ಆಗಿರುವ ಅರುಣ್ ಮಜುಮ್ದಾರ್ ಅವರನ್ನು ಇಂಧನ ಖಾತೆ ಸಚಿವರನ್ನಾಗಿ ಮಾಡಲಾಗುತ್ತದೆ ಎಂದು ವಾಷಿಂಗ್ ಟನ್ ಪೋಸ್ಟ್ ಹಾಗೂ ಪೊಲಿಟಿಕೋ ಪತ್ರಿಕೆಗಳಲ್ಲಿ ವಿಶ್ಲೇಷಿಸಲಾಗಿದೆ.

ಮಜುಮ್ದಾರ್ ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಏಜೆನ್ಸಿ-ಎನರ್ಜಿಯ ಯೋಜನಾ ಸಂಶೋಧನೆಯ ಪ್ರಥಮ ನಿರ್ದೇಶಕರಾಗಿ ಇವರು ಕಾರ್ಯನಿರ್ವಹಿಸಿದ್ದು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೈಡನ್ ಗೆ ಉನ್ನತ ಮಟ್ಟದ ಸಲಹೆಗಾರರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT