ಹಫೀಜ್ ಸಯೀದ್ 
ವಿದೇಶ

ಪಾಕಿಸ್ತಾನ: ಮುಂಬೈ ದಾಳಿಯ ರೂವಾರಿ ಹಫೀಜ್​ ಸಯೀದ್​ಗೆ ಮತ್ತೆ 10 ವರ್ಷ ಜೈಲು

ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್​​-ಉದ್​-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ​ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಲಾಹೋರ್: ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್​​-ಉದ್​-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ​ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಜುಲೈ 17ರಂದು ನಡೆದ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಮತ್ತೆ ಎರಡು ಪ್ರಕರಣಗಳಲ್ಲಿ ಕೋರ್ಟ್​ ಹಫೀಜ್ ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ ನೀಡಿದೆ. ಅಲ್ಲದೆ ಹಫೀಜ್​ನ ಮೂವರು ಸಹಚರರಿಗೂ ನ್ಯಾಯಾಲಯ ಜೈಲು ಶಿಕ್ಷೆ  ನೀಡಿದೆ.

ಹಫೀಜ್​ ಹಾಗೂ ಆತನ ಇಬ್ಬರು ಸಹಚರರಾದ ಜಫರ್​ ಇಕ್ಬಾಲ್​ ಹಾಗೂ ಯಹ್ಯಾ ಮುಜಾಹಿದ್​ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ಹಾಗೂ ಹಫೀಜ್​ ಭಾವ ಅಬ್ದುಲ್​ ರೆಹ್ಮಾನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್​ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 24 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ. ಇನ್ನು ಉಳದಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ತೀರ್ಪು ಹೊರ ಬರಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT