ಜೋ ಬೈಡನ್ 
ವಿದೇಶ

28 ವರ್ಷಗಳಿಂದ ರಿಪಬ್ಲಿಕನ್ ಭದ್ರಕೋಟೆಯಾಗಿದ್ದ ಜಾರ್ಜಿಯಾದಲ್ಲಿ ಜೋ ಬೈಡನ್ ಭರ್ಜರಿ ಗೆಲುವು

28 ವರ್ಷಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಯಾಗಿದ್ದ ಜಾರ್ಜಿಯಾ ಕ್ಷೇತ್ರದಲ್ಲಿ ನಿಯೋಜಿತ ಅಮೆರಿಕಾ ಅಧ್ಯಕ್ಷ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 

ವಾಷಿಂಗ್ಟನ್: 28 ವರ್ಷಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಯಾಗಿದ್ದ ಜಾರ್ಜಿಯಾ ಕ್ಷೇತ್ರದಲ್ಲಿ ನಿಯೋಜಿತ ಅಮೆರಿಕಾ ಅಧ್ಯಕ್ಷ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 

ನ.3ರಂದು ನಡೆದ ಅಮೆರಿಕಾ ಅಧ್ಯಕ್ಷೀಯ ಚುನಾವಣೆತ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕೆಲ ಕಾರಣಗಳಿಂದಾಗಿ ಕೆಲವು ಕ್ಷೇತ್ರಗಳಲ್ಲಿ ಮತಗಳ ಮರುಎಣಿಕೆ ಕಾರ್ಯ ನಡೆಯುತ್ತಿದೆ. 

ಇದರಂತೆ ಜಾರ್ಜಿಯಾ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು ಮತಗಳನ್ನು ಮರುಎಣಿಕೆ ಮಾಡಿದ್ದು. ಇದರಲ್ಲಿ ಜೋ ಬೈಡನ್ ಅವರು ವಿಜೇತರಾಗಿದ್ದಾರೆಂದು ಘೋಷಣೆ ಮಾಡಿದ್ದಾರೆ. 

50 ಲಕ್ಷ ಮತಗಳನ್ನು ಮರುಎಣಿಕೆ ಮಾಡಿದ ಬಳಿಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಟ್ರಂಪ್‌ ವಿರುದ್ಧ 12,284 ಮತಗಳ ಅಂತರದಿಂದ ವಿಜೇತರಾಗಿರುವುದಾಗಿ ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ. ಈ ಮೊದಲು ಅವರು ಬೈಡನ್ 14000 ಮತಗಳಿಂದ ಜಯಗಳಿಸಿದ್ದರು. 1992 ರಲ್ಲಿ ಅಭ್ಯರ್ಥಿ ಬಿಲ್‌ ಕ್ಲಿಂಟನ್ ಜಯಗಳಿಸಿದ ನಂತರ, ಈ ಕ್ಷೇತ್ರದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳಾರೂ ಗೆಲುವು ಸಾಧಿಸಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel