ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಚೀನಾ ರಕ್ಷಣಾ ಸಚಿವರ ಭೇಟಿ

 ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು,  ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇಸ್ಲಾಮಾಬಾದ್:  ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು,  ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಸಭೆಯಲ್ಲಿ ಪರಸ್ಪರ ಹಿತಾಸಕ್ತಿಗಳು, ಪ್ರಾದೇಶಿಕ ಭದ್ರತೆ ಹಾಗೂ ದ್ವಿಪಕ್ಷೀಯ ರಕ್ಷಣಾ ಸಹಕಾರ ಬಲಪಡಿಸುವುದು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು.

ಉಭಯ ದೇಶಗಳ ಸೇನೆ ನಡುವೆ ರಕ್ಷಣಾ ಸಹಕಾರಕ್ಕಾಗಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಪಾಕಿಸ್ತಾನ ಸೇನಾ ಮಾಧ್ಯಮ ವಿಭಾಗ ಇಂಟರ್ ಸರ್ವೀಸ್ ಪಬ್ಲಿಕ್ ರಿಲೇಷನ್ಸ್ ತಿಳಿಸಿದೆ.  ಆದರೆ, ಎಂಓಯು ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದು ಇಲ್ಲಿ ಗಮನಾರ್ಹವಾಗಿದೆ.

ಚೀನಾದ ರಕ್ಷಣಾ ಸಚಿವರು ನಿನ್ನೆ ನೇಪಾಳಕ್ಕೆ ಭೇಟಿ ನೀಡಿ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಹಾಗೂ ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಪೂರ್ಣಚಂದ್ರ ತಾಪಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಉಭಯ ದೇಶಗಳ ನಡುವೆ ಸಹಕಾರವನ್ನು ಪುನರಾರಂಭಿಸುವ ಜೊತೆಗೆ ಕೋವಿಡ್-19 ಕಾರಣದಿಂದ ಸ್ಥಗಿತಗೊಂಡಿದ್ದ ತರಬೇತಿ ಕಾರ್ಯಕ್ರಮ ಪುನರಾರಂಭಿಸುವ ಕುರಿತು ಚರ್ಚೆಗಳು ನಡೆದ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT