ವಿದೇಶ

ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್: ಮಹಾಮಾರಿ ವೈರಸ್ ನಿಂದ ಅಮೆರಿಕಾ ಅಧ್ಯಕ್ಷ ಗುಣಮುಖ

Manjula VN

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆಂದು ಶ್ವೇತಭವನದ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಡೊನಾಲ್ಡ್ ಟ್ರಂಪ್ ಅವರು ಕೊರೋನಾ ಸೋಂಕಿಗೊಳಗಾಗಿದ್ದರು. ನಂತರ ವೈದ್ಯರ ಸಲಹೆ ಮೇರೆಗೆ ಸೇನಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕು ತಗುಲಿದ ದಿನದಿಂದಲೂ ಟ್ರಂಪ್ ಅವರಿಗೆ ನಿಯಮಿತವಾಗಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ. 

ಟ್ರಂಪ್ ಅವರಿಗೆ ಆ್ಯಂಟಿಜನ್ ಪರೀಕ್ಷೆ ಸೇರಿದಂತೆ ಇತರೆ ಸುಧಾರಿತ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಟ್ರಂಪ್ ಅವರು ಇದೀಗ ಗುಣಮುಖರಾಗಿದ್ದು, ಆದರೂ ಅವರ ಆರೋಗ್ಯ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

SCROLL FOR NEXT