ವಿದೇಶ

ವಿಶ್ವದಾದ್ಯಂತ ಕೊರೋನಾ ಅಬ್ಬರ: ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 80 ಲಕ್ಷ

Manjula VN

ವಾಷಿಂಗ್ಟನ್: ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 780 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,084,888 ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಸದ್ಯ, ವಿಶ್ವದಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 38,033,287 ಸಾವಿನ ಸಂಖ್ಯೆ 1,084,888ರಷ್ಟಿದೆ ಎಂದು ವಿಶ್ವವಿದ್ಯಾಲಯದ ಸಿಸ್ಟಮ್ಸ್ ಸೈನ್ಸ್ ಮತ್ತು ಇಂಜನಿಯರಿಂಗ್ ಕೇಂದ್ರ ತನ್ನ ನವೀಕೃತ ಮಾಹಿತಿ ಸಂಚಿಕೆಯಲ್ಲಿ ತಿಳಿಸಿದೆ.

38,033,287 ಮಂದಿ ಒಟ್ಟಾರೆ ಸೋಂಕಿತರ ಪೈಕಿ 26,388,633 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,423,619 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ಪಟ್ಟಿಯಲ್ಲಿ ಭಾರತದ ಮೊದಲ ಸ್ಥಾನದಲ್ಲಿದ್ದು, ಭಾರತದಲ್ಲಿ ಈ ವರೆಗೂ 6,227,295 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 

ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಅಮೆರಿಕಾದಲ್ಲಿ 7,854,917 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 215,861 ಮಂದಿ ಸಾವನ್ನಪ್ಪಿದ್ದಾರೆ. 

SCROLL FOR NEXT