ವಿದೇಶ

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ ಕಾಲ್ತುಳಿತ, 11 ಮಂದಿ ಸಾವು

Lingaraj Badiger

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶ ತೊರೆಯಲು ವೀಸಾಗಾಗಿ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಸಾವಿರಾರು ಜನ ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ಅಟೌಲಾ ಖೋಗಿಯಾನಿ ತಿಳಿಸಿದ್ದಾರೆ.

ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ. ಇವರು ಪಾಕಿಸ್ತಾನಕ್ಕೆ ತೆರಳಲು ವೀಸಾ ಪಡೆಯಲು ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ, ಉತ್ತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 34 ಅಫಘಾನ್ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT