ಭಾರತದ ಬೆನ್ನಿಗೆ ನಿಂತ ರಷ್ಯಾ: ಪಾಕಿಸ್ತಾನಕ್ಕೆ ಶಾಸ್ತ್ರಾಸ್ತ್ರ ಪೂರೈಸಲು ನಕಾರ
ಭಾರತದ ಮನವಿಗೆ ಸ್ಪಂದಿಸಿರುವ ರಷ್ಯಾ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಕೆ ಮಾಡುವುದಕ್ಕೆ ನಿರಾಕರಿಸಿದೆ.
ಮಾಸ್ಕೋ: ಭಾರತದ ಮನವಿಗೆ ಸ್ಪಂದಿಸಿರುವ ರಷ್ಯಾ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಕೆ ಮಾಡುವುದಕ್ಕೆ ನಿರಾಕರಿಸಿದೆ.
ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡದೇ ಇರುವುದಕ್ಕೆ ಬದ್ಧ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗಿನ ಮಾತುಕತೆ ವೇಳೆ ರಷ್ಯಾದ ರಕ್ಷಣಾ ಸಚಿವ ಜನರಲ್ ಸೆರ್ಗೆ ಶೋಯಿಗು ಸ್ಪಷ್ಟಪಡಿಸಿದ್ದಾರೆ .
ಶಾಂಘೈ ಸಹಕಾರ ಸಂಘ(ಎಸ್ ಸಿಒ)ದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾಗೆ ತೆರಳಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ನಡೆದ ಸಭೆಯಲ್ಲಿ ರಷ್ಯಾ-ಭಾರತ ರಕ್ಷಣಾ ಸಚಿವರು ವಿಸ್ತೃತ ಚರ್ಚೆ ನಡೆಸಿದ್ದಾರೆ.
ರಷ್ಯಾ ರಕ್ಷಣಾ ಸಚಿವರೊಂದಿಗೆ ರಕ್ಷಣೆ, ಭದ್ರತೆಗೆ ಸಂಬಂಧಿಸಿದಂತೆ ಅತ್ಯುತ್ತಮ ಮಾತುಕತೆ ನಡೆಯಿತು, ಉಭಯ ದೇಶಗಳ ನಡುವೆ ಕಾರ್ಯತಂತ್ರ ಪಾಲುದಾರಿಕೆ ಹಾಗೂ ರಕ್ಷಣಾ ಪಾಲುದಾರಿಕೆಯನ್ನು ಗಟ್ಟಿಗೊಳಿಸುವ ಸಂಬಂಧ ಚರ್ಚೆ ನಡೆಸಲಾಯಿತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.