ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆಯಾಗಿ ಭಾರತೀಯ ಮೂಲದ ಮಹಿಳೆ ನೇಮಕ
ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ನ್ಯೂನ್ಹ್ಯಾಮ್ ಕಾಲೇಜಿನ ಪ್ರಾದ್ಯಾಪಕಿ ಡಾ. ಮನಾಲಿ ದೇಸಾಯಿ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಲಂಡನ್: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ನ್ಯೂನ್ಹ್ಯಾಮ್ ಕಾಲೇಜಿನ ಪ್ರಾದ್ಯಾಪಕಿ ಡಾ. ಮನಾಲಿ ದೇಸಾಯಿ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಯುನೈಟೆಡ್ ಕಿಂಗ್ಡಮ್ ವಿಶ್ವವಿದ್ಯಾನಿಕಯವೊಂದರ ಒಂದು ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರವಾಗಿದ್ದಾರೆ.
ಕಂಪಾರಿಟಿವ್ ಆಂಡ್ ಹಿಸ್ಟೋರಿಕ್ ಸೋಷಿಯಾಲಜಿಯ ರೀಡರ್ ಹಾಗೂ ನ್ಯೂನ್ಹ್ಯಾಮ್ ಕಾಲೇಜಿನ ಫೆಲೋ ಆಗಿರುವ ದೇಸಾಯಿ, ಸಾಮಾಜಿಕ ಚಳುವಳಿಗಳು, ಜನಾಂಗೀಯ ಮತ್ತು ಲಿಂಗಭೇದದ ಹಿಂಸಾಚಾರ ಮತ್ತು ವಸಾಹತೋತ್ತರಅಧ್ಯಯನಗಳ ಮೇಲೆ ಸಾಕಷ್ಟು ಸಂಶೋಧನೆ ನಡೆಸಿದ್ದಾರೆ.
"ಸಮಾಜಶಾಸ್ತ್ರವು ನಮ್ಮ ಸುತ್ತಲಿನ ಪ್ರಪಂಚವನ್ನುಅರಿತುಕೊಳ್ಳಲ್ಲು ಸಾಧ್ಯವಾಗುವ ಸಾಧನಗಳನ್ನು ನೀಡುತ್ತದೆ ಮತ್ತು ಆದ್ದರಿಂದ ಇಂತಹ ಕಠಿಣ ಅವಧಿಯಲ್ಲಿ ಇಲಾಖೆಯ ಮುಖ್ಯಸ್ಥ ಹುದ್ದೆ ಸಿಕ್ಕಿದ್ದು ಉತ್ತಮ ಅವಕಾಶವಾಗಿದೆ ಎಂದು ನಾನು ಭಾವಿಸುತ್ತೇನೆ" ಎಂದು ದೇಸಾಯಿ ಹೇಳಿದರು,
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.