ಟೆಕ್ಸಾಸ್ ನಲ್ಲಿ ಗುಂಡಿನ ದಾಳಿ: ಓರ್ವ ಸಾವು, ನಾಲ್ವರಿಗೆ ಗಾಯ
ಅಮೆರಿಕಾದ ಟೆಕ್ಸಾಸ್ ನ ಬ್ರಿಯಾನ್ ಉದ್ಯಮ ಪ್ರದೇಶದ ಬಳಿ ಬಂದೂಕುದಾರಿಯೊಬ್ಬ ಐವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಬ್ರಿಯಾನ್ ಪೊಲೀಸ್ ಇಲಾಖೆ ಮುಖ್ಯಸ್ಥ ಎರಿಕ್ ಬುಸ್ಕೆ ತಿಳಿಸಿದ್ದಾರೆ.
ವಾಷಿಂಗ್ಟನ್: ಅಮೆರಿಕಾದ ಟೆಕ್ಸಾಸ್ ನ ಬ್ರಿಯಾನ್ ಉದ್ಯಮ ಪ್ರದೇಶದ ಬಳಿ ಬಂದೂಕುದಾರಿಯೊಬ್ಬ ಐವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಬ್ರಿಯಾನ್ ಪೊಲೀಸ್ ಇಲಾಖೆ ಮುಖ್ಯಸ್ಥ ಎರಿಕ್ ಬುಸ್ಕೆ ತಿಳಿಸಿದ್ದಾರೆ.
ಗುಂಡಿನ ದಾಳಿಯಿಂದ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ನಾಲ್ವರನ್ನು ಸೇಂಟ್ ಜೋಸೆಫ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂದೂಕು ದಾರಿ ಅವರ ವಶದಲ್ಲಿದಲ್ಲಿದ್ದಿರಬಹುದು ಎಂದು ಶಂಕಿಸಿರುವ ಪೊಲೀಸ್ ಮುಖ್ಯಸ್ಥ ಬುಸ್ಕ್, ಆತ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಎಂದು ಕಂಡುಬರುತ್ತಿದೆ. ಗುಂಡಿನ ದಾಳಿಯ ಉದ್ದೇಶದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.