ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು
ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಲಂಡನ್: ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಈಗಾಗಲೇ ವಿಳಂಬವಾಗಿದ್ದ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ಮುಂದಿನ ವಾರಕ್ಕೆ ನಿಗದಿಯಾಗಿತ್ತು. ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.
"ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಈ ತಿಂಗಳ ಬಳಿಕ ಭಾರತದ ಪ್ರಧಾನಿ ಹಾಗೂ ಬ್ರಿಟನ್ ನ ಪ್ರಧಾನಿ ಇಬ್ಬರೂ ಮಾತುಕತೆ ನಡೆಸಲಿದ್ದಾರೆ" ಎಂದು ಬ್ರಿಟನ್ ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.