ವಿದೇಶ

ಇಸ್ರೇಲ್: ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ, 40 ಮಂದಿ ದಾರುಣ ಸಾವು

Shilpa D

ಜೆರುಸಲೇಂ: ಇಸ್ರೇಲ್‌ನಲ್ಲಿ ಶುಕ್ರವಾರ ನಡೆದ ಯಹೂದಿ ಧಾರ್ಮಿಕ ಸಭೆಯ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 

ಲಾಗ್‌ ಬೋಮರ್‌ ಆಚರಿಸಲು ಇಸ್ರೇಲ್‌ ಮೌಂಟ್‌ ಮೆರೂರ್‌ನಲ್ಲಿ ಸಾಮೂಹಿಕ ಸಭೆಯನ್ನು ಆಯೋಜಿಸಲಾಗಿತ್ತು. ಸಂಭ್ರಮದ ವೇಳೆ ಮೆಟ್ಟಿಲುಗಳ ಮೇಲಿಂದ ಜನರು ಒಬ್ಬರ ಮೇಲೊಬ್ಬರು ಬಿದ್ದಿರುವುದು ದುರಂತಕ್ಕೆ ಕಾರಣವಾಗಿದ್ದು ಸುಮಾರು 103 ಮಂದಿ ಗಾಯಗಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಧಿಕಾರಿಗಳು ನೀಡಿದ್ದ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ ಘಟನಾ ಸ್ಥಳದಲ್ಲಿ ಅಧಿಕ ಸಂಖ್ಯೆಯ ಜನಸಮೂಹ ನೆರೆದಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತಾನ್ಯಾಹು, ‘ಭೀಕರ ದುರಂತ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ವರದಿ ಪ್ರಕಾರ ಸುಮಾರು 10 ಸಾವಿರ ಮಂದಿ ಸೇರಿದ್ದರು ಎಂದು ತಿಳಿದು ಬಂದಿದೆ, ಮಧ್ಯರಾತ್ರಿ ಈ ದುರಂತ ಸಂಭವಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಜನರನ್ನು ಚದುರಿಸಲು ಹರಸಾಹಸ ಪಟ್ಟಿದ್ದಾರೆ. ಅಷ್ಟರಲ್ಲಾಗಲೇ ಕಾಲ್ತುಳಿತದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

SCROLL FOR NEXT