ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಬಾಂಗ್ಲಾದೇಶದಲ್ಲಿ 4 ಹಿಂದೂ ದೇವಾಲಯಗಳು ಧ್ವಂಸ!

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ ವರದಿಯಾಗಿದ್ದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿಯೂ ಅಲ್ಲಿನ ಹಿಂದೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದೇವಾಲಯಗಳ ಭಂಜನ ಪ್ರಕರಣಗಳು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ಧ್ವಂಸಗೊಂಡಿರುವ ವಿಗ್ರಹಗಳು
Srinivas Rao BV
Updated On : 9 Aug 2021, 12:07 pm

ಢಾಕ: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ ವರದಿಯಾಗಿದ್ದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿಯೂ ಅಲ್ಲಿನ ಹಿಂದೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದೇವಾಲಯಗಳ ಭಂಜನ ಪ್ರಕರಣಗಳು ವರದಿಯಾಗಿದೆ. 

ಇಲ್ಲಿನ ಖುಲ್ನಾ ಜಿಲ್ಲೆಯಲ್ಲಿ ಕನಿಷ್ಟ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಪೊಲೀಸರು 10 ಮಂದಿಯನ್ನು ಬಂಧಿಸಿದ್ದು ಪ್ರದೇಶದಲ್ಲಿ ಬಿಗಿ ಭದ್ರತೆ ಒದಗಿಸಿದ್ದಾರೆ. ಶಿಯಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರದಂದು ಹಿಂದೂ ಹಾಗೂ ಮುಸಲ್ಮಾನ ನಿವಾಸಿಗಳ ನಡುವೆ ಮಾತಿನ ಚಕಮಕಿಯ ಪರಿಣಾಮ ಈ ಘಟನೆ ನಡೆದಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಪ್ರಕಟಿಸಿದೆ. 

ಸ್ಥಳೀಯ ನಿವಾಸಿಗಳು ಹಾಗೂ ಸಂತ್ರಸ್ತರ ಪ್ರಕಾರ, ಶಿಯಾಲಿ ಮಹಾಸ್ಮಾಶನ್ ದೇವಾಲಯದ ಮೇಲೆ ದಾಳಿ ನಡೆಸಿದ್ದು ವಿಗ್ರಹಗಳನ್ನು ಧ್ವಂಸಗೊಳಿಸಿ ಚಿತಾಗಾರದ ಮೇಲೆಯೂ ದಾಳಿ ನಡೆಸಿದ್ದಾರೆ. ಅಲ್ಲಿಂದ ಶಿಯಾಲಿಯ ಪುರ್ಬಪಾರ ಪ್ರದೇಶದಲ್ಲಿಯೂ ದಾಳಿ ನಡೆಸಿದ್ದು, ಅಲ್ಲಿಯೂ ಹಿಂದೂ ದೇವಾಲಯ ಹಾಗೂ ವಿಗ್ರಹಗಳ ಮೇಲೆ ದಾಳಿ ನಡೆಸಿದ್ದು, ಹರಿ ಮಂದಿರ್, ದುರ್ಗಾ ಮಂದಿರ, ಗೋವಿಂದ ಮಂದಿರಗಳ ಮೇಲೆಯೂ ದಾಳಿ ನಡೆದಿದೆ. 

Advertisement

Advertisement

ದೇವಾಲಯಗಳಷ್ಟೇ ಅಲ್ಲದೇ 6 ಮಳಿಗೆಗಳು ಸ್ಥಳೀಯ ಹಿಂದೂ ಸಮುದಾಯದ ಎರಡು ಮನೆಗಳನ್ನೂ ಧ್ವಂಸಗೊಳಿಸಲಾಗಿದೆ. ರೂಪಾ ಉಪಜಿಲಾ ಪೂಜೆ ಉದಜಪನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್ ಸೇನ್ ಈ ಬಗ್ಗೆ ಮಾತನಾಡಿದ್ದು, ಈ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಆದರೆ ಸ್ಥಳೀಯ ಆಡಳಿತ ಪರಿಸ್ಥಿತಿ ನಿಭಾಯಿಸುವುದಕ್ಕೆ ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 

Related Article

ಪಾಕ್‍ ನಲ್ಲಿ ಹಿಂದೂ ದೇವಸ್ಥಾನದಲ್ಲಿ ದಾಂಧಲೆ ಪ್ರಕರಣ: 20ಕ್ಕೂ ಅಧಿಕ ಮಂದಿ ಬಂಧನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments