ಹೈಟಿಯಲ್ಲಿ ಭಾರಿ ಭೂಕಂಪ: ಸಾವಿನ ಸಂಖ್ಯೆ 304ಕ್ಕೆ ಏರಿಕೆ
ಕೆರಿಬಿಯನ್ ದ್ವೀಪರಾಷ್ಟ್ರ ಹೈಟಿಯ ಸೇಂಟ್ ಲೂಯಿಸ್ ಪಟ್ಟಣದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 304ಕ್ಕೆ ಏರಿಕೆಯಾಗಿದೆ. ದುರ್ಘಟನೆಯಲ್ಲಿ 1800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೋರ್ಟ್ ಒ ಪ್ರಿನ್ಸ್: ಕೆರಿಬಿಯನ್ ದ್ವೀಪರಾಷ್ಟ್ರ ಹೈಟಿಯ ಸೇಂಟ್ ಲೂಯಿಸ್ ಪಟ್ಟಣದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 304ಕ್ಕೆ ಏರಿಕೆಯಾಗಿದೆ. ದುರ್ಘಟನೆಯಲ್ಲಿ 1800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
2010ರಲ್ಲಿ ಸಂಭವಿಸಿದ್ದ ಭೂಕಂಪದಿಂದ ಚೇತರಿಸಿಕೊಳ್ಳಲು ಹರಸಾಹಸ ಪಟ್ಟಿದ್ದ ಹೈಟಿಯಲ್ಲಿ ಶನಿವಾರ ಬೆಳಿಗ್ಗೆ ಶಕ್ತಿಶಾಲಿ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7.2 ದಾಖಲಾಗಿದೆ. ಭೂಕಂಪಕ್ಕೆ ಗಗನಚುಂಬಿ ಕಟ್ಟಡಗಳು, ಚರ್ಚುಗಳು, ಹೋಟೆಲುಗಳು ನೆಲಸಮವಾಗಿವೆ ಎಂದು ತಿಳಿದುಬಂದಿದೆ.
ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ ಸೇಂಟ್ ಲೂಯಿಸ್ ಪಟ್ಟಣದಿಂದ 125 ಕಿ.ಮೀ ದೂರದ ರಾಜಧಾನಿ ಪೋರ್ಟ್ ಒ ಪ್ರಿನ್ಸ್ ನಲ್ಲೂ ಭೂಮಿ ಅದುರಿದ ಅನುಭವವಾಗಿದೆ ಎಂದು ತಿಳಿದುಬಂದಿದೆ.
ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದ್ದು ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಹೈಟಿಗೆ ನೆರವಿನ ಹಸ್ತ ಚಾಚಿವೆ.
Related Article
ಇಂಡೋನೇಷ್ಯಾ ಭೂಕಂಪ, ಮೃತರ ಸಂಖ್ಯೆ 56ಕ್ಕೆ ಏರಿಕೆ
ಟರ್ಕಿ ಭೂಕಂಪನ: 26ಕ್ಕೇರಿದ ಸಾವಿನ ಸಂಖ್ಯೆ, 700 ಮಂದಿಗೆ ಗಾಯ, ಗ್ರೀಸ್ ನಲ್ಲಿ ಸುನಾಮಿ ಸ್ಥಿತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.