ವಿದೇಶ

ಕಾಬುಲ್: ಅಮೆರಿಕಾ ರಾಯಭಾರಿ ಕಚೇರಿ, ಅಧ್ಯಕ್ಷೀಯ ಸ್ಥಳದಲ್ಲಿ ಪ್ರಬಲ ಸ್ಫೋಟ

Manjula VN

ಕಾಬುಲ್: ಕಾಬುಲ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಹಾಗೂ ಅಧ್ಯಕ್ಷೀಯ ಸ್ಥಳದಲ್ಲಿ ಎರಡು ಪ್ರಬಲ ಸ್ಫೋಟಗಳು ಸಂಭವಿಸಿದೆ ಎಂದು ತಿಳಿದುಬಂದಿದೆ. 

ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಅಮೆರಿಕಾ ರಾಯಭಾರ ಕಚೇರಿಯ ತನ್ನ ರಾಜತಾಂತ್ರಿಕ ಸಿಬ್ಬಂದಿಗಳನ್ನು ಕಾಬುಲ್ ವಿಮಾನ ನಿಲ್ದಾಣಕ್ಕೆ ಕರೆತಂದು ಸ್ಥಳಾಂತರ ಮಾಡಲು ಪ್ರಯತ್ನ ನಡೆಸಿತ್ತು.

ಈ ವೇಳೆ ಅಮೆರಿಕಾ ರಾಯಭಾರಿ ಕಚೇರಿ ಹಾಗೂ ಅಧ್ಯಕ್ಷೀಯ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟ ಗೊಂಡ ಕೆಲವೇ ನಿಮಿಷಗಳಲ್ಲಿ ತಾಲಿಬಾನ್ ಉಗ್ರರು ಸ್ಥಳದಲ್ಲಿ ಗುಂಡಿನ ದಾಳಿ ನಡೆಸಿದ್ದಾರಂದು ತಿಳಿದುಬಂದಿದೆ. 

ನಿನ್ನೆಯಷ್ಟೇ ಭದ್ರತೆ ಕುರಿತು ತನ್ನ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದ ಅಮೆರಿಕಾ, ಕಾಬುಲ್ ನಲ್ಲಿ ಭದ್ರತಾ ಪರಿಸ್ಥಿತಿ ತ್ವರಿತಗತಿಯಲ್ಲಿ ಬದಲಾಗುತ್ತಿದೆ ಎಂದು ಹೇಳಿತ್ತು.

ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಭಾನುವಾರ ಅಧಿಕಾರವನ್ನು ಬಿಟ್ಟುಕೊಟ್ಟ ಬಳಿಕ, ಅಫ್ಘಾನ್ ಸರ್ಕಾರ ಮತ್ತು ತಾಲಿಬಾನ್ ಸಂಧಾನಕಾರರ ನಡುವೆ ಮಾತುಕತೆ ನಡೆದಿದ್ದು, ನಂತರ ತಾಲಿಬಾನ್ ಮಧ್ಯಂತರ ಸರ್ಕಾರವನ್ನು ರಚಿಸಿದೆ. ಅಫ್ಘಾನಿಸ್ತಾನ ಸರ್ಕಾರವು ತಾಲಿಬಾನ್ ಪಡೆಗಳಿಗೆ ಶರಣಾದ ನಂತರ ಮುಲ್ಲಾ ಅಬ್ದುಲ್ ಘನಿ ಬರದಾರ್ ಈಗ ತಾಲಿಬಾನ್ ಆಡಳಿತದಲ್ಲಿ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ

SCROLL FOR NEXT